CAFE BLAST | ಭೀಕರ ಘಟನೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಂಡಿ ದಿವ್ಯಾ

Update: 2024-03-01 16:27 GMT

ಬೆಂಗಳೂರು:ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಈ ನಡುವೆ ಕೆಫೆ ವ್ಯವಸ್ಥಾಪಕ ನಿರ್ದೇಶಕಿ(ಎಂಡಿ) ದಿವ್ಯಾ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼʼರಾಮೇಶ್ವರಂ ಕೆಫೆಯ ಕೈತೊಳೆಯುವ ಸ್ಥಳದಲ್ಲಿ ಸ್ಫೋಟವಾಗಿದೆ. ಕಿಚನ್ ಹೊರಗಡೆ ಪ್ಲೇಟ್ಗಳನ್ನು ಇಡುವ ಸ್ಥಳದಲ್ಲಿ ಸ್ಫೋಟವಾಗಿದೆ. ಕೆಫೆಯಲ್ಲಿ ವಿದ್ಯುತ್ ಅವಘಡ ಅಥವಾ ಸಿಲಿಂಡರ್ ಸ್ಫೋಟವಾಗಿಲ್ಲ. ಹೊರಗಿನಿಂದ ತಂದಿಟ್ಟ ಬ್ಯಾಗ್ ಸ್ಫೋಟವಾಗಿದೆʼʼ ಎಂದು ಹೇಳಿದ್ದಾರೆ.

ʼʼ10 ಸೆಕೆಂಡ್ ಅಂತರದಲ್ಲಿ 2 ಬಾರಿ ಸ್ಫೋಟವಾಗಿದೆ. ಒಂದು ಬ್ಯಾಂಗ್ ತಂದಿಟ್ಟ ನಂತರ ಭಾರಿ ಪ್ರಮಾಣದಲ್ಲಿ ಸ್ಫೋಟವಾಗಿದ್ದು, ನಾಲ್ವರು ಗ್ರಾಹಕರು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆʼʼ ಎಂದು ಮಾಹಿತಿ ನೀಡಿದರು.

ʼʼಈ ಹಿಂದೆ 2 ಬಾರಿ ಅನುಮಾನಾಸ್ಪದ ಬ್ಯಾಗ್ ತಂದಿಟ್ಟು ಹೋಗಿದ್ದರು. ಒಂದು ಬ್ಯಾಗ್ ತೆಗೆದು ನೋಡಿದಾಗ ಮಡಕೆ ಕುಡಿಕೆ ಪತ್ತೆಯಾಗಿತ್ತು. ಮತ್ತೊಂದು ಬ್ಯಾಗನ್ನು ನಿರ್ಜನ ಪ್ರದೇಶದಲ್ಲಿರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಬ್ಯಾಗನ್ನು ಪೊಲೀಸರಿಗೆ ಒಪ್ಪಿಸಿದ್ದೆವು, ಅದರಲ್ಲಿ ಏನಿತ್ತು ಗೊತ್ತಿಲ್ಲ. ಘಟನೆ ಬಗ್ಗೆ ಪೊಲೀಸರಿಗೆ ದೂರನ್ನು ನೀಡಿದ್ದೆವು. ಇಂದು ಕೂಡ ವಾಸ್ ಬೇಸಿನ್ ಬಳಿ ಬ್ಯಾಗ್ ತಂದಿಟ್ಟು ಹೋಗಿದ್ದರು. ಆ ಬ್ಯಾಗ್ ಇರಿಸಿದ್ದ ಸ್ಥಳದಲ್ಲೇ ಇಂದು ಸ್ಫೋಟವಾಗಿದೆʼʼ ಎಂದು ಹೇಳಿದರು.

ಇನ್ನು ಸ್ಫೋಟದ ಹಿಂದೆ ಹಲವು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಸ್ಥಳಕ್ಕೆ ಸುತ್ತಮುತ್ತಲಿನ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಎಸಿಪಿ ರೀನಾ ಸುವರ್ಣ ಮತ್ತು ಮಾರತ್ತಹಳ್ಳಿ ಪೊಲೀಸರು ಸಹ ಸ್ಳಳದಲ್ಲಿ ಮೊಕ್ಕಂ ಹೂಡಿದ್ದಾರೆ.

Tags:    

Similar News