Ranya Rao: ಚಿನ್ನ ಕಳ್ಳಸಾಗಣೆ ಪ್ರಕರಣ, ರನ್ಯಾ ರಾವ್​​ ಜಾಮೀನು ಅರ್ಜಿ ವಜಾ

ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ಯಾಂಡಲ್​ವುಡ್ ನಟಿ ರನ್ಯಾ ರಾವ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.;

Update: 2025-04-26 06:28 GMT

ರನ್ಯಾ ರಾವ್‌

ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ಯಾಂಡಲ್​ವುಡ್  ನಟಿ ರನ್ಯಾ ರಾವ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಎರಡನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯೂ ವಜಾ ಆಗಿದೆ.

ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಿಂದ ಆದೇಶ ಹೊರಡಿಸಿದ್ದು, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ವಿರುದ್ಧ ಇತ್ತೀಚಿಗಷ್ಟೆ ಡಿಆರ್‌ಐ ರನ್ಯಾ ಮೇಲೆ ಕಾಫಿಪೋಸ ಕಾಯ್ದೆ ಜಾರಿ ಮಾಡಿತ್ತು.

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರ್ಚ್ 3ರಂದು ಬಂಧನ ಆಗಿದ್ದ ರನ್ಯಾ ಸದ್ಯ ಜೈಲಿನಲ್ಲಿದ್ದಾರೆ. ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಂಬಂಧಿಸಿದಂತೆ 49 ಕೆ.ಜಿ ಚಿನ್ನ ಬೆಂಗಳೂರಿಗೆ ಕಳ್ಳಸಾಗಣೆ ಆಗಿದೆ. ಚಿನ್ನ ಕಳ್ಳಸಾಗಣೆ ಮಾಡಲು ಹವಾಲ ಮೂಲಕ ಹಣದ ವಹಿವಾಟು ಆಗಿದೆ ಎಂದು ಪ್ರಕರಣದ ಮೂರನೇ ಆರೋಪಿ ಸಾಹಿಲ್ ಜೈನ್ ಇತ್ತೀಚೆಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದ. 

Tags:    

Similar News