ಅತ್ಯಾಚಾರ ಆರೋಪ | ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ FIR

ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಗೆ ಬೆಂಗಳೂರಿಗೆ ಬಂದಿದ್ದ ಮಹಿಳೆಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಸೂಚಿಸಿದ್ದರು. ಒಬ್ಬರೇ ವಿಮಾನ ನಿಲ್ದಾಣ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲೇ ಅತ್ಯಾಚಾರ ನಡೆಸಿ ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಬೆಳೆಸುತ್ತೇನೆ ಎಂದು ಆಮಿಷವೊಡ್ಡಿದ್ದರು ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಹೇಳಲಾಗಿದೆ;

Update: 2024-10-09 05:34 GMT
ವಿನಯ್ ಕುಲಕರ್ಣಿ
Click the Play button to listen to article

ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ತಮ್ಮ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 34 ವರ್ಷದ ಮಹಿಳೆಯೊಬ್ಬರು ಮಂಗಳವಾರ ಬೆಂಗಳೂರಿನ ಸಂಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿಯನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಎಂಬುವನನ್ನು ಆರೋಪಿ 2 (A2) ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ.

 2022 ರಲ್ಲಿ ಮಹಿಳೆ ಶಾಸಕರನ್ನು ಭೇಟಿಯಾಗಿದ್ದರು. ಬಳಿಕ ಶಾಸಕ ವಿನಯ್ ಕುಲಕರ್ಣಿ ರೈತರೊಬ್ಬರಿಂದ ಅವರ ಫೋನ್ ಸಂಖ್ಯೆಯನ್ನು ಪಡೆದು ಅವರಿಗೆ ಕರೆ ಮಾಡುತ್ತಿದ್ದರು. ಕೆಲವು ತಿಂಗಳ ಬಳಿಕ ಅವರು ಮಹಿಳೆಗೆ ನಗ್ನವಾಗಿ ವೀಡಿಯೊ ಕರೆ ಮಾಡಿ ಹೆಬ್ಬಾಳದಲ್ಲಿರುವ ತನ್ನ ಮನೆಗೆ ಬರುವಂತೆ ಒತ್ತಾಯಿಸಿದರು. ಆಕೆ ನಿರಾಕರಿಸಿದಾಗ ರೌಡಿಗಳ ತಂಡವೊಂದು, ಶಾಸಕರ ಮನೆಗೆ ಹೋಗದಿದ್ದಲ್ಲಿ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು ಎಂದು ಮಹಳೆ ದೂರಿನಲ್ಲಿ ತಿಳಿಸಿದ್ದಾರೆ. 

ಏಪ್ರಿಲ್‌ನಲ್ಲಿ ಶಾಸಕರು ಆಕೆಯನ್ನು ಬೆಳಗಾವಿಗೆ ಕರೆಸಿಕೊಂಡಿದ್ದರು. ಅಲ್ಲಿ ಅವರು ಅವಳನ್ನು ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದರು. ಆದರೆ ಕೆಲವರು ಶಾಸಕರು ಆ ಸಂದರ್ಭದಲ್ಲಿ ಭೇಟಿಯಾಗಲು ಬಂದಾಗ ಸಂತ್ರಸ್ತ ಮಹಿಳೆ ತಪ್ಪಿಸಿಕೊಂಡಿದ್ದಾರೆ.

ಆಗಸ್ಟ್ 24 ರಂದು ಕೆಲಸದ ನಿಮಿತ್ತ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಬೆಂಗಳೂರಿಗೆ ಬಂದಿದ್ದ ಮಹಿಳೆಗೆ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಸೂಚಿಸಿದ್ದರು. ಒಬ್ಬರೇ ಬಂದು ವಿಮಾನ ನಿಲ್ದಾಣ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ನಡೆಸಿ ರಾಜಕೀಯದಲ್ಲಿ ದೊಡ್ಡಮಟ್ಟದಲ್ಲಿ ಬೆಳೆಸುತ್ತೇನೆ ಎಂದು ಆಮಿಷವೊಡ್ಡಿದ್ದರು.

ಬಳಿಕ 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಭೇಟಿ ಮಾಡಿದ್ದರು. ಬಳಿಕ ಐಫೋನ್ ತೆಗೆದುಕೊಂಡು ಅವರ ಪಕ್ಷದ ಸದಸ್ಯನೊಬ್ಬನ ಕೈಗೆ ಇರಿಸಿ ಫೋಟೋ ಹಾಗೂ ವಿಡಿಯೋ ತೆಗೆದುಕೊಳ್ಳುವಂತೆ ತಿಳಿಸಿದ್ದರು. ಬಳಿಕ ಫೋನ್ ನನಗೆ ನೀಡಿದರು. ಇದಾದ ಬಳಿಕ ನಾನು ಮತ್ತು ಶಾಸಕರು ಫೋನ್ ನಲ್ಲಿ ನಡೆಸಿದ್ದ ಸಂಭಾಷಣೆಯ ಆಡಿಯೋ ವೈರಲ್ ಆಗಿತ್ತು. ಶಾಸಕರು ನಾನೇ ಆಡಿಯೋ ಲೀಕ್ ಮಾಡಿದ್ದೇನೆಂದು ಶಂಕಿಸಿದ್ದರು. ಬಳಿಕ ಅರ್ಜುನ್ ಅವರಿಗೆ ಕರೆ ಮಾಡಿ ಆಡಿಯೋ ಲೀಕ್ ಮಾಡಿದ್ದು ನಾನಲ್ಲ ಎಂದು ಹೇಳಿದ್ದೆ. ಆದರೆ, ಅವರು ನಂಬಲಿಲ್ಲ. ಶಾಸಕರು ನಿರ್ಜನ ಪ್ರದೇಶಕ್ಕೆ ನನ್ನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದರು.

ಅಕ್ಟೋಬರ್ 2 ರಂದು ಅವರು ಧರ್ಮಸ್ಥಳಕ್ಕೆ ಕರೆದೊಯ್ದರು, ಅಲ್ಲಿ ಶಾಸಕರು ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಮರುದಿನ ಅವರು ಅಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಯಾರಿಗೂ ವಿಚಾರ ತಿಳಿಸದಂತೆ ಬೆದರಿಕೆ ಹಾಕಿದರು. ನಂತರ ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವಂತೆ ಅರ್ಜುನ್ ಅವರಿಗೆ ಸೂಚಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506, 504, 201, 366, 376, 323, 354 ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Tags:    

Similar News