Prajwal Revanna Rape Case | ಅತ್ಯಾಚಾರ ಪ್ರಕರಣ ಕೈ ಬಿಡಲು ನಿರಾಕರಣೆ; ಕಣ್ಣೀರಿಟ್ಟು ಆರೋಪ ಅಲ್ಲಗಳೆದ ಪ್ರಜ್ವಲ್‌ ರೇವಣ್ಣ

ಅತ್ಯಾಚಾರ ಪ್ರಕರಣ ಕೈಬಿಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿ ವಿಚಾರಣೆಯನ್ನು ಏ.​ 9ಕ್ಕೆ ಮುಂದೂಡಿದೆ.;

Update: 2025-04-03 15:25 GMT

ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ.

ಅತ್ಯಾಚಾರ ಪ್ರಕರಣ ಕೈಬಿಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಪ್ರಜ್ವಲ್ ರೇವಣ್ಣ ಮೇಲಿನ ಆರೋಪಗಳನ್ನು ಓದಿ ವಿವರಿಸುವಾಗ ನಾನು ಯಾವುದೇ ತಪ್ಪು ಮಾಡಿಲ್ಲ. ಮಹಿಳೆ ಮಾಡಿರುವ ಆರೋಪಗಳು ಸುಳ್ಳು ಎಂದು ಹೇಳಿ ಪ್ರಜ್ವಲ್ ಕಣ್ಣೀರಿಟ್ಟರು. 

ಪ್ರಜ್ವಲ್‌ ರೇವಣ್ಣ ಪರಿ ಪರಿ ಮನವಿಯನ್ನು ಮಾನ್ಯ ಮಾಡದ ನ್ಯಾಯಾಲಯವು ಪ್ರಕರಣ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು. ಮುಂದಿನ ವಿಚಾರಣೆಯನ್ನು ಏ.​ 9ಕ್ಕೆ ಮುಂದೂಡಿದೆ.

ಮೈಸೂರಿನ ಕೆ.ಆರ್.‌ನಗರದ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ನ್ಯಾಯಾಧೀಶರು 

ಪ್ರಕರಣದಲ್ಲಿ ಲಭ್ಯವಿರುವ ವಿದ್ಯುನ್ಮಾನ ಸಾಕ್ಷ್ಯಗಳು, ಮೊಬೈಲ್ ಫೋನ್‌ನಲ್ಲಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಈ ಹಿಂದೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿತ್ತು. ಮಾಜಿ ಸಂಸದ, ಪ್ರತಿಷ್ಠಿತ ಕುಟುಂಬಕ್ಕೆ ಸೇರಿದವರು ಎಂದ ಮಾತ್ರಕ್ಕೆ ಕಾನೂನನ್ನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಅರ್ಜಿ ಇತ್ಯರ್ಥಪಡಿಸಿತ್ತು.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಪ್ರಜ್ವಲ್‌ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿವೆ. ಎಲ್ಲಾ ಪ್ರಕರಣಗಳ ರನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ 2024 ಆಗಸ್ಟ್ ತಿಂಗಳಲ್ಲಿ 2,144 ಪುಟಗಳ ದೋಚಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.  

ಪ್ರಕರಣದ ಹಿನ್ನೆಲೆ ಏನು?

ಲೋಕಸಭೆ ಚುನಾವಣೆ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್​ಗಳನ್ನು ಹಾಸನದಲ್ಲಿ ಹಂಚಿಕೆಯಾಗಿದ್ದವು. ಕೆಲ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದ್ದವು. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಲಾಗಿತ್ತು. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​ನಲ್ಲಿ ಜಾಮೀನು ಅರ್ಜಿಗಳು ವಜಾಗೊಂಡಿದ್ದವು. 

ಇನ್ನು ಪೆನ್‌ಡ್ರೈವ್‌ ಹಂಚಿಕೆ ಮಾಡಿದ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ‌ಪ್ರಕರಣ ಕುರಿತಂತೆಯೂ ವಿಶೇಷ ತನಿಖಾ ದಳ ತನಿಖೆ ನಡೆಸುತ್ತಿದೆ. 

Similar News