ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್‌ಗೆ ಹಾಜರಾದ ನಟ ದರ್ಶನ್
ಪ್ರಕರಣದ ಆರೋಪಿಗಳ ಹಾಜರಾತಿಯನ್ನು ಪಡೆದ ನ್ಯಾಯಾಧೀಶರು, ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದರು.;
By : The Federal
Update: 2025-07-10 14:25 GMT
ನಟ ದರ್ಶನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರು ಇಂದು ಇಲ್ಲಿನ 57ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು. ಆದರೆ, ಪ್ರಕರಣದ ಮತ್ತೊಬ್ಬ ಆರೋಪಿ ಪವಿತ್ರಾ ಗೌಡ ಅವರು ಗೈರು ಹಾಜರಾಗಿದ್ದರು.
ಪ್ರಕರಣದ ಆರೋಪಿಗಳ ಹಾಜರಾತಿಯನ್ನು ಪಡೆದ ನ್ಯಾಯಾಧೀಶರು, ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದರು. ಮುಂದಿನ ವಿಚಾರಣೆಗೆ ಎಲ್ಲಾ ಆರೋಪಿಗಳೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.
2024ರ ಜೂನ್ 8ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಸ್ವಾಮಿ ಅವರ ಕೊಲೆ ನಡೆದಿತ್ತು. ಈ ಕೊಲೆಯ ಆರೋಪದ ಮೇಲೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 16 ಮಂದಿ ಆರೋಪಿಗಳನ್ನು ಪೊಲೀಸರು ಜೂನ್ 11ರಂದು ಬಂಧಿಸಿದ್ದರು. ಪ್ರಕರಣದ ಎಲ್ಲಾ ಆರೋಪಿಗಳಿಗೂ ಈಗಾಗಲೇ ಜಾಮೀನು ದೊರೆತಿದ್ದು, ನ್ಯಾಯಾಲಯ ನಿಗದಿಪಡಿಸಿದ ದಿನಾಂಕದಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.