Renukaswamy murder case| ರೇಣುಕಾಸ್ವಾಮಿ ಕೊಲೆ ಪ್ರಕರಣ: ಹೆಚ್ಚುವರಿ ಆರೋಪಪಟ್ಟಿ ಸಲ್ಲಿಕೆ; ದರ್ಶನ್​ಗೆ ಸಂಕಷ್ಟ

ದರ್ಶನ್​ ಜಾಮೀನು ಅರ್ಜಿ ವಿಚಾರಣೆ ವೇಳೆ ಅವರ ಪರ ವಕೀಲರು, ಘಟನೆ ನಡೆದಾಗ ದರ್ಶನ್ ಸ್ಥಳದಲ್ಲಿ ಇರಲೇ ಇಲ್ಲ ಎಂಬಂತೆ ವಾದ ಮಂಡಿಸಿದ್ದರು. ಆದರೆ ಈಗ ಈ ಫೋಟೊ ಬಹಿರಂಗವಾದ ಬಳಿಕ ದರ್ಶನ್ ಸ್ಥಳದಲ್ಲಿ ಇದ್ದರು ಎಂಬುದಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ.;

Update: 2025-05-21 05:48 GMT

ನಟ ದರ್ಶನ್‌ 

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಹಾಗೂ ಇತರ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಮಂಗಳವಾರ (ಮೇ 20) ನ್ಯಾಯಾಲಯಕ್ಕೆ ಹೆಚ್ಚುವರಿ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ. ಈ ಹೊಸ ಚಾರ್ಜ್‌ಶೀಟ್‌ನಿಂದಾಗಿ ದರ್ಶನ್ ಮತ್ತು ಇತರೆ ಆರೋಪಿಗಳ ಸಂಕಷ್ಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ತನಿಖಾಧಿಕಾರಿಗಳು 132 ಪುಟಗಳ ಈ ಹೆಚ್ಚುವರಿ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದರಲ್ಲಿ ಕೆಲವು ಮಹತ್ವದ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಕೊಲೆಯಾದ ದಿನ ಶೆಡ್‌ನಲ್ಲಿ ದರ್ಶನ್ ಅವರು ಅಲ್ಲಿದ್ದ ಕೆಲವು ಆರೋಪಿಗಳೊಂದಿಗೆ ತೆಗೆಸಿಕೊಂಡಿದ್ದ ಫೋಟೋವನ್ನು ಪೊಲೀಸರು ಈಗ ರಿಟ್ರೀವ್ ಮಾಡಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದರ್ಶನ್ ಜೊತೆಗೆ ಪುನೀತ್, ರವಿಶಂಕರ್, ಅನುಕುಮಾರ್ ಮತ್ತು ಜಗದೀಶ್ ಈ ಫೋಟೋವನ್ನು ತೆಗೆಸಿಕೊಂಡಿದ್ದರು. ನಂತರ ಈ ಫೋಟೋಗಳನ್ನು ಡಿಲೀಟ್ ಮಾಡಲಾಗಿತ್ತು. ಪುನೀತ್ ಅವರ ಮೊಬೈಲ್‌ನಲ್ಲಿ ಈ ಫೋಟೋ ಇದ್ದು, ಪೊಲೀಸರು ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ನಂತರ ಫೋಟೋವನ್ನು ಮರುಪಡೆದಿದ್ದಾರೆ.

ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ಅವರ ಪರ ವಕೀಲರು, ಘಟನೆ ನಡೆದಾಗ ದರ್ಶನ್ ಸ್ಥಳದಲ್ಲಿ ಇರಲಿಲ್ಲ ಎಂದು ವಾದ ಮಂಡಿಸಿದ್ದರು. ಆದರೆ, ಈಗ ಈ ಫೋಟೋ ಬಹಿರಂಗವಾದ ಬಳಿಕ ದರ್ಶನ್ ಘಟನಾ ಸ್ಥಳದಲ್ಲಿ ಇದ್ದರು ಎಂಬುದಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ. ಈ ಹೊಸ ಸಾಕ್ಷ್ಯವು ದರ್ಶನ್‌ಗೆ ದೊಡ್ಡ ಕಂಟಕವಾಗಬಹುದು ಎಂದು ಹೇಳಲಾಗುತ್ತಿದೆ.

Tags:    

Similar News