ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮಂಡ್ಯ- ರಾಮನಗರದಲ್ಲಿ ದರ್ಶನ್ ವಿರುದ್ಧ ರೈತರ ಆಕ್ರೋಶ
ರೇಣುಕಾಸ್ವಾಮಿ ಕೊಲೆ ಖಂಡಿಸಿ ಮಂಡ್ಯದಲ್ಲಿ ರೈತ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ನಟ ದರ್ಶನ್ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದರು.;
ರೇಣುಕಾಸ್ವಾಮಿ ಕೊಲೆ ಖಂಡಿಸಿ ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ನಟ ದರ್ಶನ್ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದ ಸಂಜಯ್ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಕರ್ನಾಟಕ ರಾಜ್ಯ ರೈತ ಸಂಘ ರ‍್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿತು. ದರ್ಶನ್ ಸೇರಿ ಎಲ್ಲ ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಲು ರೈತರು ಆಗ್ರಹಿಸಿದರು.
ರಾಮನಗರದಲ್ಲೂ ಪ್ರತಿಭಟನೆ
ರೇಣುಕಾಸ್ವಾಮಿ ಕೊಲೆ ಖಂಡಿಸಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.
ದರ್ಶನ್ ಹಾಗೂ ಇತರೆ ಕನ್ನಡ ನಟರು ಡಾ.ರಾಜಕುಮಾರ್ ಆದರ್ಶ ಪಾಲಿಸಲಿ. ಕೇವಲ ಹಣಕ್ಕಾಗಿ ಕಲಾವಿದರಾಗುವುದು ಬೇಡ ಎಂದರು. ಈಗಿನ ನಟರು ಪೇಯ್ಡ್ ಆಕ್ಟರ್ಸ್ ಆಗಿದ್ದಾರೆ. ಇವರಿಗೆ ಯಾವುದೇ ಮೌಲ್ಯಗಳಿಲ್ಲ. ಪೊಲೀಸ್ ಇಲಾಖೆ ಸೂಕ್ತ ಕ್ರಮವಹಿಸಬೇಕು. ತಪ್ಪಿತಸ್ಥರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ಕ್ರಮವಾಗಬೇಕು ಎಂದು ಚನ್ನಪಟ್ಟಣದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳು ಆಗ್ರಹಿಸಿದರು.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಹೊಡೆದು ಕೊಂದ ಆರೋಪದ ಮೇಲೆ ಪೋಲಿಸರು ನಟ ದರ್ಶನ್ ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.