ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿ: ವಿಜಯೇಂದ್ರಗೆ ಈಶ್ವರಪ್ಪ ಸವಾಲು

ತಮ್ಮ ಪುತ್ರನಿಗೆ ಟಿಕೆಟ್ ಸಿಗದೆ ಇರುವುದಕ್ಕೆ ಬಂಡಾಯ ಎದ್ದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯದಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.;

Update: 2024-04-07 15:05 GMT
ಕೆ.ಎಸ್‌ ಈಶ್ವರಪ್ಪ

ತಮ್ಮ ಪುತ್ರನಿಗೆ ಟಿಕೆಟ್ ಸಿಗದೆ ಇರುವುದಕ್ಕೆ ಬಂಡಾಯ ಎದ್ದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯದಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.

ಭಾನುವಾರ ಬೆಳಿಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕೆ.ಎಸ್ ಈಶ್ವರಪ್ಪ ಅವರು ಕೆ.ಎಸ್ ಈಶ್ವರಪ್ಪ ಅವರು ಹಿರಿಯರು, ಕಾಲ ಇನ್ನೂ ಮಿಂಚಿಲ್ಲ ಅವರು ಬಿಜೆಪಿಗೆ ವಾಪಸ್ ಬರಬೇಕು ಎಂದು ಮನವಿ ಮಾಡಿದ್ದರು.

ಅಲ್ಲದೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಬಿ.ವೈ. ರಾಘವೇಂದ್ರ ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ಜನ ಮೆಚ್ಚುಗೆ ಸೂಚಿಸಿದ್ದು, ಈ ಬಾರಿ ಅವರು 2 ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಹೇಳಿದ್ದರು.

ವಿಜಯೇಂದ್ರ ಮಾತಿಗೆ ತೀಕ್ಷಣವಾಗಿಯೇ ಪ್ರತಿಕ್ರಿಯಿಸಿರುವ ಈಶ್ವರಪ್ಪ, ನೀನು ಸ್ಪರ್ಧೆ ಮಾಡಬೇಡ, ಈಶ್ವರಪ್ಪ ಗೆಲ್ಲಲಿ ಬಿಡು ಎಂದು ನಿಮ್ಮಣ್ಣ ರಾಘವೇಂದ್ರಗೆ ಹೇಳು. ನೀನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಬಿಡು ಎಂದಿದ್ದಾರೆ.

Tags:    

Similar News