ಕೊಪ್ಪಳದಲ್ಲಿ ಹುಲಿಗೆಮ್ಮ ದೇವಿ ಪಾದಯಾತ್ರೆ ದುರಂತ, ಭಕ್ತರ ಮೇಲೆ ಹರಿದ ಬಸ್, ಮೂವರ ಸಾವು

ದೇವಸ್ಥಾನವನ್ನು ತಲುಪಲು ಕೇವಲ ಮೂರು ಗಂಟೆಗಳ ನಡಿಗೆ ಬಾಕಿ ಇರುವಾಗಲೇ ಈ ದುರ್ಘಟನೆ ಸಂಭವಿಸಿದೆ. ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆಯುತ್ತಿದ್ದ ಭಕ್ತರ ಮೇಲೆ ಹರಿದಿದೆ.

Update: 2025-10-07 04:30 GMT

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು

Click the Play button to listen to article

ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಬಸ್ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ನಿವಾಸಿಗಳಾದ ಅನ್ನಪೂರ್ಣ (40), ಪ್ರಕಾಶ್ (25), ಮತ್ತು ಶರಣಪ್ಪ (19) ಮೃತಪಟ್ಟ ದುರ್ದೈವಿಗಳು.

ತಳ್ಳಿಹಾಳ ಗ್ರಾಮದಿಂದ ಒಟ್ಟು ಏಳು ಮಂದಿ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಪಾದಯಾತ್ರೆ ಕೈಗೊಂಡಿದ್ದರು. ದೇವಸ್ಥಾನವನ್ನು ತಲುಪಲು ಕೇವಲ ಮೂರು ಗಂಟೆಗಳ ನಡಿಗೆ ಬಾಕಿ ಇರುವಾಗಲೇ ಈ ದುರ್ಘಟನೆ ಸಂಭವಿಸಿದೆ. ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆಯುತ್ತಿದ್ದ ಭಕ್ತರ ಮೇಲೆ ಹರಿದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Tags:    

Similar News