ಮಂಗಳೂರಿನ ಮುತ್ತೂಟ್ ಫೈನಾನ್ಸ್‌ಗೆ ಕನ್ನ ಯತ್ನ; ಕೇರಳ ದರೋಡೆಕೋರರ ಗ್ಯಾಂಗ್ ಕೈವಾಡದ ಮಾಹಿತಿ ಬಹಿರಂಗ
ದೇರಳಕಟ್ಟೆ ಮುತ್ತೂಟ್ ಫೈನಾನ್ಸ್‌ಗೆ ಕನ್ನ ಹಾಕಲು ಯತ್ನಿಸಿದ ಪ್ರಕರಣದಲ್ಲಿ ಕೇರಳ ದರೋಡೆಕೋರರ ತಂಡ ಇತ್ತು ಎಂಬ ಸಂಗತಿಯನ್ನು ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.;
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರಿನ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಬೆನ್ನಲ್ಲೇ ದೇರಳಕಟ್ಟೆ ಮುತ್ತೂಟ್ ಫೈನಾನ್ಸ್‌ಗೆ ಕನ್ನ ಹಾಕಲು ಯತ್ನಿಸಿ ಸಿಕ್ಕಿಬಿದ್ದ ಇಬ್ಬರು ಆರೋಪಿಗಳಿಂದ ಪೊಲೀಸರು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ.
ದೇರಳಕಟ್ಟೆ ಮುತ್ತೂಟ್ ಫೈನಾನ್ಸ್‌ಗೆ ಕನ್ನ ಹಾಕಲು ಯತ್ನಿಸಿದ ಪ್ರಕರಣದಲ್ಲಿ ಕೇರಳ ದರೋಡೆಕೋರರ ತಂಡ ಇತ್ತು ಎಂಬ ಸಂಗತಿಯನ್ನು ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.
ಕೇರಳ ಮೂಲದ ಐವರು ದರೋಡೆಕೋರರಿಂದ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಲಾಗಿತ್ತು. ದರೋಡೆಗೂ ಮೊದಲು ಮುರುಳಿ ನೇತೃತ್ವದ ತಂಡವು ಫೈನಾನ್ಸ್‌ನಲ್ಲಿ ಭಾರೀ ಪ್ರಮಾಣದಲ್ಲಿ ಚಿನ್ನಾಭರಣವಿರುವ ಬಗ್ಗೆ ಮಾಹಿತಿ ಕಲೆ ಹಾಕಿತ್ತು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.
ಕನ್ನ ಹಾಕುವ ಮುನ್ನ ತಡರಾತ್ರಿ ಕಟ್ಟಡದ ಹಿಂದಿನ ಮರವೇರಿ ಫೈನಾನ್ಸ್ ಕಟ್ಟಡ ಪ್ರವೇಶಿಸಿದ್ದ ಮುರುಳಿ, ಹರ್ಷದ್ ಮತ್ತು ಲತೀಫ್, ಅತ್ಯಾಧುನಿಕ ಸೈಲೆಂಟ್ ಡ್ರಿಲ್ ಮಿಷನ್ ತಂದಿದ್ದರು. ಫೈನಾನ್ಸ್ನಲ್ಲಿದ್ದ ಅತ್ಯಾಧುನಿಕ ಸೆನ್ಸರ್ ಸೈರನ್ ಮೊಳಗಿದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಮುರುಳಿ ಮತ್ತು ಹರ್ಷದ್ ಸಿಕ್ಕಿಬಿದ್ದಿದ್ದರು. ಲತೀಫ್ ಸ್ಥಳದಿಂದ ಪರಾರಿಯಾಗಿದ್ದ.
ಮುತ್ತೂಟ್ ಫೈನಾನ್ಸ್‌ನಲ್ಲಿ 35 ಕೆ.ಜಿ.ಗೂ ಹೆಚ್ಚು ಚಿನ್ನಾಭರಣ ಇತ್ತು ಎನ್ನಲಾಗಿದೆ. ಇದೇ ಮೂವರು ಆರೋಪಿಗಳು ಕೇರಳದಲ್ಲಿ ಈ ಹಿಂದೆ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಕೆಲ ದಿನಗಳ ಹಿಂದೆ ಮಂಗಳೂರಿನ ಕೋಟೆಕಾರು ಬ್ಯಾಂಕ್ಗೆ ನುಗ್ಗಿದ್ದ ದರೋಡೆಕೋರರು ಪಿಸ್ತೂಲ್ ತೋರಿಸಿ, 12 ಕೋಟಿ ರೂ.ಮೌಲ್ಯದ ಚಿನ್ನಾಭರಣ ದೋಚಿದ್ದರು. ಇದಾದ ಕೆಲ ದಿನಗಳಲ್ಲೇ ದೇರಳಕಟ್ಟೆ ಜಂಕ್ಷನ್ ಸಮೀಪದ ಮುತ್ತೂಟ್ ಫೈನಾನ್ಸ್‌ಗೆ ಕನ್ನ ಹಾಕಲು ಪ್ರಯತ್ನಿಸಿದ್ದರು.