ಕೊಡಗಿನಲ್ಲಿ ಹಾಕಿ ಮಹೋತ್ಸವ: ಸರ್ಕಾರದಿಂದ 1 ಕೋಟಿ ರೂ. ಅನುದಾನ- ಸಿಎಂ ಭರವಸೆ
ಕೊಡಗಿನ ಹಾಕಿ ಪಟುಗಳು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿದಂತೆ ಹಲವು ಪ್ರಮುಖ ಟೂರ್ನಿಗಳಲ್ಲಿ ಅವರು ಭಾರತಕ್ಕೆ ಗೌರವ ತಂದಿದ್ದಾರೆ.
2026ರ ಮೇ ತಿಂಗಳಲ್ಲಿ ನಡೆಯಲಿರುವ ಹಾಕಿ ಮಹೋತ್ಸವಕ್ಕೆ ರಾಜ್ಯ ಸರ್ಕಾರದಿಂದ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ "ಚೇನಂಡ ಹಾಕಿ ಪಂದ್ಯಾವಳಿ"ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೊಡವರು ಎಂದರೆ ಹಾಕಿ, ಹಾಕಿ ಎಂದರೆ ಕೊಡವರು. ಕೊಡಗಿನ ಹಾಕಿ ಪಟುಗಳು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿದಂತೆ ಹಲವು ಪ್ರಮುಖ ಟೂರ್ನಿಗಳಲ್ಲಿ ಅವರು ಭಾರತಕ್ಕೆ ಗೌರವ ತಂದಿದ್ದಾರೆ. ಕೊಡಗಿನ ಜನರು ಹಾಕಿ ಕ್ರೀಡೆಗೆ ನೀಡಿದ ಕೊಡುಗೆ ಅಪಾರ, ಇದು ದೇಶದ ಕ್ರೀಡಾ ಇತಿಹಾಸದಲ್ಲಿ ಸ್ಮರಣೀಯವಾದದ್ದು ಎಂದು ಶ್ಲಾಘಿಸಿದರು.
ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ. ಕೊಡವ ಸಂಸ್ಕೃತಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಉಳಿಸಿಕೊಂಡು, ಬೆಳೆಯುತ್ತಾ ಬಂದಿದೆ. ಅವರ ಪರಂಪರೆ, ಶಿಸ್ತಿನ ಬದುಕು, ಕ್ರೀಡಾಭಿಮಾನ ಮತ್ತು ಸಂಘಟನಾ ಶಕ್ತಿ ನಮ್ಮ ರಾಜ್ಯದ ಹೆಮ್ಮೆ ಎಂದು ತಿಳಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ. ಚೆನ್ನಡ ಹಾಕಿ ಪಂದ್ಯಾವಳಿ ಕೊಡಗಿನ ಅತಿದೊಡ್ಡ ಕ್ರೀಡಾ ಉತ್ಸವಗಳಲ್ಲಿ ಒಂದಾಗಿದ್ದು, ಸಾವಿರಾರು ಹಾಕಿ ಪಟುಗಳು ಮತ್ತು ಅಭಿಮಾನಿಗಳನ್ನು ಒಂದೇ ವೇದಿಕೆಗೆ ತರಲಿದೆ ಸಿಎಂ ಹೇಳಿದರು.
“ನಾನೂ ಪಂದ್ಯಾವಳಿಯನ್ನು ಸ್ವತಃ ವೀಕ್ಷಿಸಲು ಕೊಡಗಿಗೆ ಬರುತ್ತೇನೆ. ಸರ್ಕಾರ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಬೋಸರಾಜು, ಬೈರತಿ ಸುರೇಶ್, ಶಿವರಾಜ್ ತಂಗಡಗಿ ಸೇರಿದಂತೆ ಕೊಡವ ಸಮುದಾಯದ ಹಲವು ಮುಖಂಡರು ಹಾಜರಿದ್ದರು.