ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಗೆ ಸೇರಿದ ಬಸ್ಸೊಂದು ಇದ್ದಕ್ಕಿಂದ ಬೆಂಕಿ ಹೊತ್ತಿ ಉರಿದಿರುವ ಘಟನೆ ಸಾಗರದ ಎಲ್ ಬಿ ಕಾಲೇಜಿನ ಹತ್ತಿರ ನಡೆದಿದೆ.
ಈ ಬಸ್ಸು ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದು, ಬಸ್ ನಲ್ಲಿ ಹಲವು ಪ್ರಯಾಣಿಕರಿದ್ದರು. ಸಾಗರದ ಎಲ್ ಬಿ ಕಾಲೇಜಿನ ಹತ್ತಿರ ತಾಂತ್ರಿಕ ತೊಂದರೆಯಿಂದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್‌ನಲ್ಲಿದ್ದ ಸಿಬ್ಬಂದಿಗಳು ಸವಾರರನ್ನು ಕೆಳಗೆ ಇಳಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 12 ಪ್ರಯಾಣಿಕರು ಪಾರಾಗಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುತ್ತಿದ್ದಾರೆ.