Sandalwood | ಲೈಂಗಿಕ ದೌರ್ಜನ್ಯ ತನಿಖೆಗೆ ಸಮಿತಿ: ಲಕ್ಷ್ಮಿ ಹೆಬ್ಬಾಳಕರ್
ಕಲಾವಿದೆಯರೂ ಸೇರಿದಂತೆ ಕನ್ನಡ ಚಿತ್ರರಂಗದ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚನೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.;
By : The Federal
Update: 2024-09-17 08:14 GMT
ಕಲಾವಿದೆಯರೂ ಸೇರಿದಂತೆ ಕನ್ನಡ ಚಿತ್ರರಂಗದ ಎಲ್ಲ ಕ್ಷೇತ್ರಗಳಲ್ಲೂ ನಡೆಯುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚನೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 'ಚಿತ್ರರಂಗದ ಕಲಾವಿದೆಯರ ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿ, ಚರ್ಚೆ ನಡೆಸಿದೆ. ಮಹಿಳಾ ದೌರ್ಜನ್ಯ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಪಡೆದಿದ್ದಾರೆ. ಆದರೆ, ಕನ್ನಡ ಚಿತ್ರರಂಗದ ಯಾವ ಕಲಾವಿದೆಯರೂ ನನ್ನ ಬಳಿ ಇಂತಹ ಸಮಸ್ಯೆಗಳ ಕುರಿತು ಚರ್ಚಿಸಿಲ್ಲ' ಎಂದರು.
'ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಳಿಸುವುದಿಲ್ಲ. ಲಿಂಗತ್ವ ಅಲ್ಪಸಂಖ್ಯಾತರಿಗೆ ಯೋಜನೆ ಜಾರಿಗೊಳಿಸಿದ ದಿನದಿಂದ ಇಲ್ಲಿಯವರೆಗಿನ ಅಷ್ಟೂ ಬಾಕಿ ಒಟ್ಟಿಗೆ ಜಮೆ ಮಾಡಲಾಗುವುದು' ಎಂದು ಹೇಳಿದರು.