ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್: ಪ್ರಕರಣ ದಾಖಲು
ಲಕ್ಷ್ಮೀದೇವಿ ಜಾತ್ರೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ ಅವರು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ಘೋಷಣೆಗಳನ್ನು ಕೂಗಿದ್ದಾರೆ.;
By : The Federal
Update: 2025-07-05 12:17 GMT
ಗೋಕಾಕ್ ಪಟ್ಟಣದಲ್ಲಿ ನಡೆದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸಾವಿರಾರು ಜನರಿದ್ದ ಜಾತ್ರಾ ಸ್ಥಳದಲ್ಲಿ, ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸಂತೋಷ್ ಜಾರಕಿಹೊಳಿ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.
ಲಕ್ಷ್ಮೀದೇವಿ ಜಾತ್ರೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ ಅವರು ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ಘೋಷಣೆಗಳನ್ನು ಕೂಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.