ಶಾಲಾ ಮಕ್ಕಳಿಗೆ ಖುಷಿ ಸುದ್ದಿ | ಇಂದಿನಿಂದ ವಾರಕ್ಕೆ ಆರು ದಿನ ಮೊಟ್ಟೆ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿಯ 56,00,000 ಮಕ್ಕಳಿಗೆ ಬುಧವಾರದಿಂದ (ಸೆ.25) ಮಧ್ಯಾಹ್ನದ ಬಿಸಿಯೂಟದ ಜೊತೆಗೆ 6 ದಿನ ಮೊಟ್ಟೆ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.

Update: 2024-09-25 06:29 GMT
ಸರಕಾರಿ ಅನುದಾನಿತ ಶಾಲಾ ಮಕ್ಕಳಿಗೆ ಇಂದಿನಿಂದ ಆರು ದಿನ ಮೊಟ್ಟೆ ಭಾಗ್ಯ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿಯ 56,00,000 ಮಕ್ಕಳಿಗೆ ಬುಧವಾರದಿಂದ (ಸೆ.26) ಮಧ್ಯಾಹ್ನದ ಬಿಸಿಯೂಟದ ಜೊತೆಗೆ 6 ದಿನ ಮೊಟ್ಟೆ ಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಯಾದಗಿರಿ ಜಿಲ್ಲೆ ಅರಕೇರಾ ಕೆ.ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಮೂಲಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸರ್ಕಾರ ಎರಡು ದಿನ ಮೊಟ್ಟೆ ಪೂರೈಸಲಿದೆ. ಇನ್ನು ಉಳಿದ ನಾಲ್ಕು ದಿನ ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಕೊಡಲಿದೆ. ಮೂರು ವರ್ಷ ಮೊಟ್ಟೆ ನೀಡಲು 1,500 ಕೋಟಿ ನೆರವು ನೀಡಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್ ನಡುವೆ ಜುಲೈನಲ್ಲಿ ಒಪ್ಪಂದ ಆಗಿತ್ತು. ಇದೀಗ ಈ ಯೋಜನೆ ಜಾರಿಗೆ ಬಂದಿದೆ.

ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ಬಿಸಿಹಾಲು, ಮೊಟ್ಟೆ, ಬಾಳೆಹಣ್ಣು ಹಾಗೂ ರಾಗಿ ಮಾಲ್ಟ್ ವಿತರಣೆ ಮಾಡುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುನ್ನಡೆಸಿಕೊಂಡು ಬರುತ್ತಿದೆ.

Tags:    

Similar News