Terror Attack: ರಾಜ್ಯದಲ್ಲಿಯೂ ಪಾಕ್‌ ಪ್ರಜೆಗಳ ತಪಾಸಣೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಕೇಂದ್ರ ಸರ್ಕಾರ ಕೈಗೊಂಡಿರುವ ರಾಜತಾಂತ್ರಿಕ ನಿರ್ಧಾರಗಳು ಸ್ವಾಗತರ್ಹವಾಗಿದ್ದು ಉಗ್ರರ ಮಟ್ಟಹಾಕಲು ಯಾವುದೇ ನಿರ್ಧಾರ ತೆಗೆದುಕೊಂಡರು ನಮ್ಮ ಬೆಂಬಲವಿದೆ ಎಂದು ಡಾ.ಜಿ. ಪರಮೇಶ್ವರ್ ತಿಳಿಸಿದರು.;

Update: 2025-04-25 13:54 GMT

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ (ಎಕ್ಸ್‌ ಖಾತೆಯಿಂದ)

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಪಾಕ್‌ ಪ್ರಜೆಗಳ ತಪಾಸಣೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕೇಂದ್ರ ಗುಪ್ತಚರ ಅಧಿಕಾರಿಗಳು ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯದಲ್ಲಿರುವ ಅಧಿಕೃತ ಹಾಗೂ ಅನಧಿಕೃತ ಪಾಕ್‌ ಪ್ರಜೆಗಳನ್ನು ತಪಾಸಣೆ ನಡೆಸಲಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದ್ದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದು, ಇದಕ್ಕೆ ಎಲ್ಲಾ ರಾಜ್ಯಗಳು ಸಹಕಾರ ನೀಡಲಿವೆ ಎಂದು ತಿಳಿಸಿದರು.

ದೇಶದಾದ್ಯಂತ ಇರುವ ಪಾಕ್‌ ಪ್ರಜೆಗಳನ್ನು ವಾಪಸ್‌ ಕಳಿಸಲಾಗುತ್ತಿದೆ, ಕೇಂದ್ರ ಸರ್ಕಾರ ಕೈಗೊಂಡಿರುವ ರಾಜತಾಂತ್ರಿಕ ನಿರ್ಧಾರಗಳು ಸ್ವಾಗತರ್ಹ ಮತ್ತು ಭಯೋತ್ಪಾದನೆ ಮಟ್ಟಹಾಕಲು ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದ್ದು, ಭಯೋತ್ಪಾದಕ ಪ್ರಕರಣಗಳು ಮತ್ತೊಮ್ಮೆ ಮರುಕಳಿಸದಂತೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳೀದರು..

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದು, ವೀಸಾ ಅವಧಿ ಮೀರಿ ಭಾರತದಲ್ಲಿ ಉಳಿದಿರುವ ಪಾಕ್‌ ಪ್ರಜೆಗಳು ರಾಜ್ಯಗಳಲ್ಲಿದ್ದರೆ ಅವರನ್ನು ಗಡಿಪಾರು ಮಾಡಬೇಕು ಎಂದು ಹೇಳಿದ್ದರು.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪಾಕಿಸ್ತಾನದ ವಿರುದ್ಧ ವೀಸಾ ರದ್ದು, ಸಿಂಧೂನದಿ ಜಲ ಒಪ್ಪಂದ ರದ್ಧತಿ ಸೇರಿದಂತೆ ಪ್ರಮುಖ ಐದು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು.

ಉಗ್ರರ ದಾಳಿಗೆ ಕರ್ನಾಟಕದ ಇಬ್ಬರು ಸೇರಿದಂತೆ ಇಪ್ಪತ್ತಾರು ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದರು.  

Tags:    

Similar News