ನಾಳೆ (ಏ.10) ದ್ವಿತೀಯ ಪಿಯು ಫಲಿತಾಂಶ: ಮಾಹಿತಿಗೆ ಇಲ್ಲಿ ನೋಡಿ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ತಿಳಿಸಿದೆ.

Update: 2024-04-09 13:22 GMT
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ.
Click the Play button to listen to article

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ (ಏ.10) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈ ಸಂಬಂಧ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ವೆಬ್​​ಸೈಟ್​ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ಹೇಳಿದೆ .

ರಾಜ್ಯದಲ್ಲಿ ಮಾ.1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. 6.98 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಶೇ 98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ಪರಿಶೀಲಿಸುವುದು ಹೇಗೆ?

· karresults.nic.in ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

· ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

· ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.

· ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.

· ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

Tags:    

Similar News