Kalyana Karnataka | ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ ಇಂಗಿತ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕೆಂಬ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕೂ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Update: 2024-12-22 07:49 GMT

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕೆಂಬ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕೂ ಇದೆ ಎಂದು ಹೇಳಿದರು.

ತೊಗರಿ ಬೆಳೆಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕೆಂಬ ಇಲ್ಲಿನ ರೈತರ ಬೇಡಿಕೆಯನ್ನು ಪರಿಶೀಲಿಸಲಾಗುವುದು. ತೊಗರಿ ಬೆಳೆಯ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

371ಜೆ ಗೆ ಕೊಡುಗೆಯಾಗಿ 371 ಬೆಡ್‌ ಆಸ್ಪತ್ರೆ

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಪ್ರಮುಖ ಪಾತ್ರ ವಹಿಸಲಿದೆ. ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಹಾಗಾಗಿಯೇ ಇಲ್ಲಿ 371 ಬೆಡ್ ಗಳ ಸುಸಜ್ಜಿತ ಆಸ್ಪತ್ರೆ ಉದ್ಘಾಟಿಸಲಾಗಿದೆ ಎಂದು ಹೇಳಿದರು.

ಸಿ.ಟಿ.ರವಿ ಹೇಳಿಕೆ ಕ್ರಿಮಿನಲ್ ಅಪರಾಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಯಾಗಿದ್ದ ರವಿ ಅವರ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಮಾತು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

Tags:    

Similar News