Weather Update | ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶೀತ ಗಾಳಿ, ಲಘು ಮಳೆ

ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಇಂದಿನಿಂದ ಮೂರು ದಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಅದೇ ಭಾಗದ ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.;

Update: 2024-12-18 05:38 GMT
ರಾಜ್ಯದಲ್ಲಿ ಶೀತಗಾಳಿ ತೀವ್ರಗೊಂಡಿದೆ

ಉತ್ತರ ಭಾರತದಲ್ಲಿನ ಶೀತ ಮಾರುತಗಳು ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಹವಾಗುಣದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಭಾಗದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಐದರಿಂದ ಆರು ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 

ಬೆಂಗಳೂರಿನಲ್ಲೂ ತಾಪಮಾನ ಕುಸಿತವಾಗಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್​, ಬಾಗಲಕೋಟೆಯಲ್ಲಿ ಚಳಿ ಹೆಚ್ಚಿದೆ. 

ಬೀದರ್, ವಿಜಯಪುರ, ಬಿಜಾಪುರ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳವರೆಗೆ ಸಾಮಾನ್ಯ ತಾಪಮಾನ 6-7 ° C ಮತ್ತು ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನ 4-5 ° C ನಷ್ಟು ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರದಲ್ಲಿ ಚಳಿಯೊಂದಿಗೆ ಚದುರಿದಂತೆ ಮಳೆಯಾಗಲಿದೆ.

ರೆಡ್ ಅಲರ್ಟ್

ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಇಂದಿನಿಂದ ಮೂರು ದಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಅದೇ ಭಾಗದ ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.

ಕೆಲವೆಡೆ ಲಘು ಮಳೆ ಸಾಧ್ಯತೆ 

ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಗಳು ಇವೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ.

Tags:    

Similar News