ಶಿಗ್ಗಾವಿ ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷ ಪಟ್ಟ

ಶಿಗ್ಗಾವಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಅವರು ಮನವೊಲಿಸಿ, ನಾಮಪತ್ರ ಹಿಂಪಡೆಯುವಂತೆ ಮಾಡಿದ್ದರು. ಈ ವೇಳೆ ಸೂಕ್ತ ಖಾದ್ರಿ ಅವರಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು.;

Update: 2024-11-25 15:18 GMT

ಶಿಗ್ಗಾವಿ ಉಪಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿ ಬಂಡಾಯ ಸಾರಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರನ್ನು ಹೆಸ್ಕಾಂ (ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ) ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿಗ್ಗಾವಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಅವರು ಮನವೊಲಿಸಿ, ನಾಮಪತ್ರ ಹಿಂಪಡೆಯುವಂತೆ ಮಾಡಿದ್ದರು. ಈ ವೇಳೆ ಸೂಕ್ತ ಖಾದ್ರಿ ಅವರಿಗೆ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು.

ಅಂತೆಯೇ ನಾಮಪತ್ರ ಹಿಂಪಡೆದಿದ್ದ ಅಜ್ಜಂಪೀರ್ ಖಾದ್ರಿ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಪರವಾಗಿ ಮತಯಾಚನೆ ಮಾಡಿದ್ದರು. ಆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದರು.

ಸತತ ನಾಲ್ಕು ಅವಧಿಗಳಿಂದ ಬಿಜೆಪಿ ಹಿಡಿತದಲ್ಲಿದ್ದ ಶಿಗ್ಗಾವಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಿಸುವಲ್ಲಿ ಯಶಸ್ವಿಯಾಗಿದ್ದರು. ಯಾಸಿರ್ ಪಠಾಣ್ ಗೆಲುವಿನ ಬೆನ್ನಲ್ಲೇ ಖಾದ್ರಿ ಅವರನ್ನು ಹೆಸ್ಕಾಂ ಅಧ್ಯಕ್ಷ ಸ್ಥಾನಕ್ಕೆ ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Tags:    

Similar News