ಜನತೆಗೆ ಸಿದ್ದರಾಮಯ್ಯ ಸರ್ಕಾರದ ಆಘಾತ; ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳ
ಕರ್ನಾಟಕ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ರಿಂದ 20.44%ಕ್ಕೆ ಹೆಚ್ಚಿಸಿದೆ. ಆದರೆ, ಪೆಟ್ರೋಲ್ ಮೇಲಿನ ತೆರಿಗೆ ಏರಿಕೆ ಮಾಡದ ಕಾರಣ ಯಾವುದೇ ವ್ಯತ್ಯಾಸ ಉಂಟಾಗಿಲ್ಲ.;
ಕರ್ನಾಟಕ ಸರ್ಕಾರವು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದೆ. ಈ ನಿರ್ಧಾರವು ತಕ್ಷಣದಿಂದ ಜಾರಿಗೆ ಬಂದಿದ್ದು, ರಾಜ್ಯದಲ್ಲಿ ಡೀಸೆಲ್ ಬೆಲೆ ಈಗ ಪ್ರತಿ ಲೀಟರ್‌ಗೆ ₹90.95ರಷ್ಟಾಗಿದೆ. ಈ ಹಿಂದೆ 2024ರ ಜೂನ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹3ರಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೊಮ್ಮೆ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಆಘಾತ ಕೊಟ್ಟಿದೆ.
ಕರ್ನಾಟಕ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ರಿಂದ 20.44%ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳದಿಂದಾಗಿ ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ₹2ರ ಏರಿಕೆಯಾಗಿದೆ. ಈ ಹಿಂದೆ 2024ರ ಜೂನ್‌ನಲ್ಲಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 25.92%ರಿಂದ 29.84%ಕ್ಕೆ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು 14.34%ರಿಂದ 18.44%ಕ್ಕೆ ಹೆಚ್ಚಿಸಲಾಗಿತ್ತು. ಆಗ ಪೆಟ್ರೋಲ್ ಬೆಲೆ ₹99.84ರಿಂದ ₹102.84ಕ್ಕೆ ಮತ್ತು ಡೀಸೆಲ್ ಬೆಲೆ ₹88.95ಕ್ಕೆ ಏರಿಕೆಯಾಗಿತ್ತು. ಈಗ ಮತ್ತೊಮ್ಮೆ ಡೀಸೆಲ್ ಬೆಲೆಯಲ್ಲಿ ₹2ರ ಏರಿಕೆಯಾಗಿದ್ದು, ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯ ಸರಣಿ ಮುಂದುವರಿದಂತಾಗಿದೆ.
ಸರ್ಕಾರದ ಸಮರ್ಥನೆ
ಪ್ರಕಟಣೆಯಲ್ಲಿ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳಲಾಗಿದೆ. "ಕರ್ನಾಟಕದಲ್ಲಿ ಇಂಧನ ಬೆಲೆಗಳು ಇತರ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಕ್ಕೆ ಹೋಲಿಸಿದರೆ ಇನ್ನೂ ಕಡಿಮೆ ಇವೆ" ಎಂದು ಅದರಲ್ಲಿ ಹೇಳಲಾಗಿದೆ. ಸರ್ಕಾರದ ಪ್ರಕಾರ, ಈ ಬೆಲೆ ಏರಿಕೆಯಿಂದ ವಾರ್ಷಿಕವಾಗಿ ಸುಮಾರು ₹2,500 ಕೋಟಿಯಿಂದ ₹2,800 ಕೋಟಿ ಹೆಚ್ಚುವರಿ ಆದಾಯ ಸಿಗಲಿದೆ ಎಂದು ಅಂದಾಜಿಸಲಾಗಿದೆ.
ಜನರ ಮೇಲೆ ಪರಿಣಾಮ
ಈ ಡೀಸೆಲ್ ಬೆಲೆ ಏರಿಕೆಯು ಸಾರಿಗೆ ವಲಯದ ಮೇಲೆ ನೇರ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಸರಕು ಸಾಗಣೆ, ಸಾರ್ವಜನಿಕ ಸಾರಿಗೆ, ಮತ್ತು ಕೃಷಿ ಉತ್ಪನ್ನಗಳ ಸಾಗಾಟದ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಸಾಮಾನ್ಯ ಜನರಿಗೆ ದಿನಸಿ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುವ ಆತಂಕವಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಇತರ ಖಾಸಗಿ ಸಾರಿಗೆ ಸಂಸ್ಥೆಗಳು ಈ ಬೆಲೆ ಏರಿಕೆಯಿಂದ ತಮ್ಮ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದರ ಜೊತೆಗೆ, ರೈತರು ಮತ್ತು ಕೃಷಿ ಸಂಬಂಧಿತ ಉದ್ಯಮಗಳ ಮೇಲೆ ಈ ಬೆಲೆ ಏರಿಕೆಯ ಪರಿಣಾಮ ಗಮನಾರ್ಹವಾಗಿರಲಿದೆ.
ವಿರೋಧ ಪಕ್ಷಗಳ ಪ್ರತಿಭಟನೆ ಸಾಧ್ಯತೆ
ಈ ಬೆಲೆ ಏರಿಕೆಯು ವಿರೋಧ ಪಕ್ಷವಾದ ಬಿಜೆಪಿಯ ತೀವ್ರ ಟೀಕೆಗೆ ಗುರಿಯಾಗಲಿದೆ. ಹೀಗಾಗಲೇ ಕರ್ನಾಟಕ ಸರ್ಕಾರವು, ಹಾಲು, ನೀರು, ಕಸ ವಿಲೇವಾರಿ ಸೇರಿದಂತೆ ಹಲವಾರು ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ. ಅದರ ಬೆನ್ನಿಗೆ ಅತ್ಯಗತ್ಯ ಡೀಸೆಲ್ ಬೆಲೆಯನ್ನೂ ಹೆಚ್ಚಿಸಿದೆ. ಇದರಿಂದ ಕೆರಳಿರುವ ಪ್ರತಿ ಪಕ್ಷಗಳು ಸರಣಿ ಪ್ರತಿಭಟನೆ ನಡೆಸುವ ಸಾಧ್ಯತೆಗಳಿಗೆ.