Suhas Shetty Murder| ಮಂಗಳೂರಿನಲ್ಲಿ ರಾತ್ರಿ 9.30ರ ಒಳಗೆ ಅಂಗಡಿ, ಹೋಟೆಲ್, ಬಾರ್ ಎಲ್ಲವೂ ಬಂದ್

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್‌ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.;

Update: 2025-05-06 05:50 GMT

ಮಂಗಳೂರು 

ಮಂಗಳೂರಿನಲ್ಲಿ ನಡೆದ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಪ್ರಕಟಿಸಿರುವ ಕಾರಣ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.

ಭಾನುವಾರ  ‘ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ’ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಹೋಟೆಲ್, ಪಬ್, ಬಾರ್​ಗಳು, ಫುಟ್​ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗುತ್ತಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. 

ಸುಹಾಸ್ ಶೆಟ್ಟಿ ಕೊಲೆ ನಂತರ ಮಂಗಳೂರಿನ ಮೂರು ಕಡೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಒಟ್ಟಾರೆಯಾಗಿ 7 ಮಂದಿಯನ್ನು ಬಂಧಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆ ಹಾಕಲಾಗಿತ್ತು.

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್​​ವೆಲ್​ ಮತ್ತು ಭರತ್ ಕುಮ್ಡೇಲ್‌ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. 

Tags:    

Similar News