Mysore MUDA Case| ಇಂದು ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ವಿಚಾರಣೆ
ಮೈಸೂರಿನಲ್ಲಿ ಸಿದ್ದರಾಮಯ್ಯ ವಿಚಾರಣೆಗೆ ಕ್ಷಣಗಣನೆ ಅರಂಭವಾಗಿದ್ದು, ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವುದಾಗಿ ಸ್ವತಹ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಕಚೇರಿ ಸುತ್ತುಮುತ್ತ ಬಿಗಿಭದ್ರತೆ ಕೈಗೊಳ್ಳಲಾಗಿದೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 40 ವರ್ಷಗಳ ತಮ್ಮ ಸುದೀರ್ಘ ರಾಜಕಾರಣದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೊದಲ ಬಾರಿಗೆ ಪೊಲೀಸರ ಮುಂದೆ ವಿಚಾರಣೆಗೆ ಬುಧವಾರ (ನ.6) ಹಾಜರಾಗಲಿದ್ದಾರೆ.
ಮುಡಾ ಪ್ರಕರಣದ ಮೊದಲ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೊಟೀಸ್ ಜಾರಿ ಮಾಡಿದ್ದು, ನ.6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು. ಹೀಗಾಗಿ ಸಿದ್ದರಾಮಯ್ಯ ಅವರ ಬುಧವಾರ ಬೆಳಿಗ್ಗೆ ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಪ್ರಕರಣದಲ್ಲಿಈಗಾಗಲೇ ಲೋಕಾಯುಕ್ತ ಪೊಲೀಸರು ಎಲ್ಲಾ ಆರೋಪಿಗಳ ವಿಚಾರಣೆ ಪೂರ್ಣಗೊಳಿಸಿದ್ದು, ಸಿಎಂ ವಿಚಾರಣೆ ಮಾತ್ರ ಬಾಕಿ ಇತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ವಿಚಾರಣೆಯಾಗಿದೆ. ಪ್ರಕರಣದ ಎರಡನೇ ಆರೋಪಿಯಾದ ಸಿಎಂ ಅವರ ಪತ್ನಿ ಬಿ.ಎಂ ಪಾರ್ವತಿ ಅವರನ್ನು ಇತ್ತೀಚೆಗೆ ರಹಸ್ಯವಾಗಿ ಲೋಕಾಯುಕ್ತ ಪೊಲೀಸರು ಮೂರು ತಾಸುಗಳ ಕಾಲ ವಿಚಾರಣೆ ನಡೆಸಿದ್ದರು.
ಮೂರನೇ ಆರೋಪಿ ಮಲ್ಲಿಕಾರ್ಜುನ ಸ್ವಾಮಿ, ನಾಲ್ಕನೇ ಆರೋಪಿ ದೇವರಾಜು ಸೇರಿ ಹಲವು ನಿವೃತ್ತ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ. ಲೋಕಾಯುಕ್ತ ಪೊಲೀಸರು ಸಿಎಂ ಅವರನ್ನು ವಿಚಾರಣೆ ಮಾಡುತ್ತಿಲ್ಲ. ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ದೂರುದಾರರಾದ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದರು.
ಮತ್ತೊಂದೆಡೆ ಇಡಿ ಅಧಿಕಾರಿಗಳು ಕೂಡ ತನಿಖೆ ತೀವ್ರಗೊಳಿಸಿದ್ದು, ಮುಡಾದ ಮಾಜಿ ಆಯುಕ್ತರು, ಸಿಎಂ ಆಪ್ತರು ಹಾಗೂ ಉದ್ಯಮಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಭದ್ರತೆ
ಮೈಸೂರಿನಲ್ಲಿ ಸಿದ್ದರಾಮಯ್ಯ ವಿಚಾರಣೆಗೆ ಕ್ಷಣಗಣನೆ ಅರಂಭವಾಗಿದ್ದು, ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವುದಾಗಿ ಸ್ವತಹ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಕಚೇರಿ ಸುತ್ತುಮುತ್ತ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಮೈಸೂರು ಸಿಟಿ ಕಮಿಷನರ್ ಸೀಮಾ ಲಾಟ್ಕರ್ ಮಂಗಳವಾರ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಈ ಹಿಂದೆ ಬುಧವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಮಯ ನಿಗದಿಗೊಳಿಸಿ ತಮ್ಮ ಪ್ರಯಾಣ ಪಟ್ಟಿ ಸಿದ್ಧಪಡಿಸಿದ್ದರು ಅದರೆ, ಅವರೇ ವಿಚಾರಣೆಗೆ ಸಮಯ ನಿಗದಿ ಮಾಡಿದ್ದಾರೆ ಎಂಬ ಟೀಕೆಗಳು ಬಂದ ಹಿನ್ನೆಲೆಯಲ್ಲಿ ಪರಿಷ್ಕೃತ ಪಟ್ಟಿ ಸಿದ್ಧವಾಗಿದ್ದರು. ಆ ಪಟ್ಟಿಯಲ್ಲಿ ಬೆಳಿಗ್ಗೆ 9.30ಕ್ಕೆ ಮೈಸೂರಿಗೆ ಸಿದ್ದರಾಮಯ್ಯ ತೆರಳಲಿದ್ದು, ಬೆಳಗ್ಗೆ 9.30ರ ನಂತರ ವಿಚಾರಣೆಗೆ ಸಮಯ ಕಾಯ್ದಿರಿಸಲಾಗಿದೆ ಎಂದು ಹೇಳಲಾಗಿದೆ.