Caste Census: ಯಾರಿಗೂ ಅನ್ಯಾಯವಾಗುವುದಿಲ್ಲ: ಸಿದ್ದರಾಮಯ್ಯ
ಈ ಸಮೀಕ್ಷೆ ಜನಗಣತಿ ಅಲ್ಲ, ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಮಾಹಿತಿ ಸಂಗ್ರಹವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಕುರಿತು ಎಚ್. ಕಾಂತರಾಜ ನೇತೃತ್ವದ ಆಯೋಗವು ಸಲ್ಲಿಸಿರುವ ವರದಿಯನ್ನು ಏಪ್ರಿಲ್ 17ರಂದು ನಡೆಯುವ ಸಚಿವ ಸಂಪುಟದ ಸಭೆದಲ್ಲಿ ಚರ್ಚೆ ನಡೆಸಲಾಗುತ್ತದೆ. ಇದರಿಂದ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ವಿಭಾಗ ಮಟ್ಟದ ಉದ್ಯೋಗ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಿ.ಎಂ, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ʻʻಈ ಸಮೀಕ್ಷೆ ಜನಗಣತಿ ಅಲ್ಲ, ಕೇವಲ ಸಾಮಾಜಿಕ ಮತ್ತು ಶೈಕ್ಷಣಿಕ ಮಾಹಿತಿ ಸಂಗ್ರಹವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು. ಒಕ್ಕಲಿಗ ಸಮುದಾಯದ ಸಚಿವರು ಮತ್ತು ಶಾಸಕರ ಅಭಿಪ್ರಾಯವನ್ನೂ ಪರಿಗಣಿಸಲಾಗುವುದುʼʼ ಎಂದು ಅವರು ತಿಳಿಸಿದರು.
ಈ ಸಂದರ್ಭ, ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತು ಮಾತನಾಡಿದ ಅವರು, "ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯಂತಹ ಕಾಂಗ್ರೆಸ್ ರಾಷ್ಟ್ರೀಯ ನಾಯಕರನ್ನು ಗುರಿಯಾಗಿಸಿ, ಬಿಜೆಪಿ ರಾಜಕೀಯ ಸಂಚು ನಡೆಸುತ್ತಿದೆʼʼ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಶಾಸಕ ಅಲ್ಲಮಪ್ರಭು ಪಾಟೀಲ ಈ ಸಂದರ್ಭದಲ್ಲಿದ್ದರು.