Sonu Nigam: ನನ್ನ ಜಂಭ ಇಳಿದಿದೆ; ಕನ್ನಡಿಗರ ಕ್ಷಮೆ ಕೋರಿದ ಸೋನು ನಿಗಮ್​

‘ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ’ ಎಂದು ಗಾಯಕ ಸೋನು ನಿಗಮ್‌ ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.;

Update: 2025-05-06 04:41 GMT

ಸೋನು ನಿಗಂ 

ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದಾಗ ಅದನ್ನು ಪಹಲ್ಗಾಮ್‌ ದಾಳಿಗೆ ತಳುಕು ಹಾಕಿ ಕನ್ನಡಿಗರಿಂದ ಭಾರಿ ವಿರೋಧ ಎದುರಿಸಿದ್ದ ಗಾಯಕ ಸೋನು ನಿಗಮ್ , ಇದೀಗ ಫಿಲ್ಮ್​ ಛೇಂಬರ್​ ''ಅಸಹಕಾರ'' ನಿರ್ಧಾರ ಕೈಗೊಂಡ ಬಳಿಕ ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ್ದಾರೆ. ನನ್ನ 'ಅಹಂ ಇಳಿದಿದೆ' ಎಂದು ಸ್ವಯಂ ಒಪ್ಪಿಕೊಂಡಿದ್ದಾರೆ.  

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಹಾಡಬೇಕು ಎಂದು ಯುವಕನೊಬ್ಬ ಮನವಿ ಮಾಡಿದಾಗ ಗಾಯಕ ಸೋನು ನಿಗಮ್ ಸಿಟ್ಟಾಗಿದ್ದರು. ತಮಗೆ ಕನ್ನಡದ ಮೇಲಿರುವ ಪ್ರೀತಿ ಮತ್ತು ಗೌರವದ ಬಗ್ಗೆ ಹೇಳಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಪ್ರಕರಣವನ್ನು ಇತ್ತೀಚೆಗೆ ನಡೆದ ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಹೋಲಿಸಿದ್ದರು.

ಅವರ ಈ ಹೇಳಿಕೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು. ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕರು ಒತ್ತಾಯಿಸಿದ್ದರು. ಇದೀಗ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಪೋಸ್ಟ್‌ವೊಂದನ್ನು ಮಾಡುವ ಮೂಲಕ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ‘ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ’ ಎಂದು ಪೋಸ್ಟ್‌ ಮಾಡಿದ್ದಾರೆ. 

ಏನಿದು ಘಟನೆ 

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯುವಕನೊಬ್ಬ ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದಾಗ ಅದನ್ನು ಪಹಲ್ಗಾಮ್‌ ದಾಳಿಗೆ ಹೋಲಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ವೇಳೆ ಸೋನು ನಿಗಮ್‌ ಕ್ಷಮೆ ಕೇಳುವ ಬದಲು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದರು. ಆಗ ಅವರ ವಿರುದ್ಧ ಇನ್ನಷ್ಟು ಆಕ್ರೋಶ ವ್ಯಕ್ತವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಿ, ಸೋನು ನಿಗಮ್ ಅವರನ್ನು ಬಹಿಷ್ಕಾರ ಮಾಡುವ ಬಗ್ಗೆಯೂ ಚರ್ಚಿಸಲಾಗಿತ್ತು. ಇದರ ಬೆನ್ನಲ್ಲೇ ಸೋನು ನಿಗಮ್ ಅವರು ಕ್ಷಮೆ ಕೇಳಿದ್ದಾರೆ.

Tags:    

Similar News