ಸೌಜನ್ಯ ಪ್ರಕರಣ: ಸುಪ್ರೀಂ ಮೇಲ್ಮನವಿಯ ನಿರ್ಧಾರ ಸೌಜನ್ಯ ತಾಯಿಗೆ ಬಿಟ್ಟಿದ್ದು: ಸಿಎಂ
ಬಿಜೆಪಿ ಹಮ್ಮಿಕೊಂಡಿರುವ ಯಾತ್ರೆಯು 'ಧರ್ಮ ಚಲೋ' ಅಲ್ಲ, ಅದು 'ರಾಜಕೀಯ ಚಲೋ'," ಎಂದು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆರೋಪಿಸಿದರು.;
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದು., . "ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಅಂತಿಮ ನಿರ್ಧಾರವನ್ನು ಸೌಜನ್ಯ ಅವರ ತಾಯಿ ಕುಸುಮಾವತಿ ಅವರೇ ತೆಗೆದುಕೊಳ್ಳಬೇಕು," ಎಂದು ಅವರು ಹೇಳಿದ್ದಾರೆ.
"ಸೌಜನ್ಯ ಪ್ರಕರಣದಲ್ಲಿ ಸಿಬಿಐ ಆರೋಪಿಯನ್ನು ಖುಲಾಸೆಗೊಳಿಸಿದೆ. ಈಗ ಬಿಜೆಪಿ ನಾಯಕರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅದರ ವೆಚ್ಚವನ್ನು ಭರಿಸುವುದಾಗಿ ಹೇಳುತ್ತಿದ್ದಾರೆ. ಇದು ಅವರ ರಾಜಕೀಯದ ಭಾಗವಾಗಿದೆ. ಆದರೆ, ಕಾನೂನಾತ್ಮಕವಾಗಿ ಮೇಲ್ಮನವಿ ಸಲ್ಲಿಸುವುದು ಸೂಕ್ತವೇ, ಇಲ್ಲವೇ ಎಂಬುದನ್ನು ಮೊದಲು ಸೌಜನ್ಯ ಅವರ ತಾಯಿ ನಿರ್ಧರಿಸಬೇಕು. ಅವರ ನಿರ್ಧಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ," ಎಂದು ಮುಖ್ಯಮಂತ್ರಿಗಳು ತಿಳಿಸಿದರು.
"ಬಿಜೆಪಿ ಹಮ್ಮಿಕೊಂಡಿರುವ ಯಾತ್ರೆಯು 'ಧರ್ಮ ಚಲೋ' ಅಲ್ಲ, ಅದು 'ರಾಜಕೀಯ ಚಲೋ'," ಎಂದು ಅವರು ಆರೋಪಿಸಿದರು. ಈ ಪ್ರಕರಣದಲ್ಲಿ, ಸಂತ್ರಸ್ತೆಯ ಕುಟುಂಬದ ಭಾವನೆಗಳಿಗೆ ಮತ್ತು ಅವರ ಕಾನೂನಾತ್ಮಕ ಹಕ್ಕುಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ಜಕ್ಕೂರು ಏರೋಡ್ರಂ ವಿಸ್ತರಣೆ
ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ ಬರುವ ಬಗ್ಗೆ ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ ಎಂದರು.
ಲಭ್ಯ ಸ್ಥಳವನ್ನು ಹೇಗೆ ಉಪಯೋಗಿಸಬೇಕು ಎಂದೂ ಚಿಂತನೆ ನಡೆಯುತ್ತಿದೆ. ವೈಮಾನಿಕ ತರಬೇತಿ ಶಾಲೆ ನಡೆಸಬೇಕೆನ್ನುವ ನ್ಯಾಯಾಲಯದ ಆದೇಶವಿದ್ದು, ಸರ್ಕಾರ ಇನ್ನೇನು ಮಾಡಬಹುದು ಎಂದು ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.