ಎಚ್ಐವಿ ಪೀಡಿತರನ್ನು ಹನಿಟ್ರ್ಯಾಪ್‌ಗೆ ಬಳಸಿದ ಆರೋಪಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕ್ರಮ: ಯು.ಟಿ. ಖಾದರ್

ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ಕುರಿತು ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಜೊತೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿದ್ದಾರೆ.

Update: 2024-12-29 07:53 GMT
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹಾಗೂ ಶಾಸಕ ಮುನಿರತ್ನ

ಅತ್ಯಾಚಾರ, ಹನಿಟ್ರ್ಯಾಪ್ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ಕುರಿತು ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಜೊತೆ ಚರ್ಚಿಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಇದರಿಂದ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಮಂಗಳೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಅನುಮತಿ ಕೋರಿದೆ. ಈ ಬಗ್ಗೆ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಾಸಕ ಮುನಿರತ್ನ ವಿರುದ್ಧದ ನಾಲ್ಕು ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ತಂಡವು ನಾಲ್ಕು ದಿನಗಳ ಹಿಂದೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಧಾನಸಭಾಧ್ಯಕ್ಷರಿಗೆ ಮನವಿ ಮಾಡಿತ್ತು.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಲಂಚಕ್ಕೆ ಬೇಡಿಕೆ, ಬೆದರಿಕೆ ಹಾಕಿದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಲಾಗಿದೆ. ಶಾಸಕ ಮುನಿರತ್ನ ಕಸ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ರೂ. ಲಂಚಕ್ಕಾಗಿ ಗುತ್ತಿಗೆದಾರ ಚಲುವರಾಜುಗೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿರುವ ಸಂಬಂಧ ಪ್ರಕರಣ ದಾಖಲಾಗಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕಾರಣ ಮುನಿರತ್ನ ವಿಚಾರಣೆಗೆ ವಿಧಾನಸಭಾಧ್ಯಕ್ಷರ ಅನುಮತಿ ಅಗತ್ಯವಾಗಿದೆ.

ಮಹಿಳೆಯ ಮೇಲಿನ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಈಚೆಗಷ್ಟೇ ಎಸ್ಐಟಿ ಅಧಿಕಾರಿಗಳು 2481 ಪುಟ ದೋಷಾರೋಪ ಪಟ್ಟಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಎಚ್ಐವಿ ಪೀಡಿತರನ್ನು ಹನಿಟ್ರ್ಯಾಪ್‌ಗೆ ಬಳಸಿದ ಆರೋಪ ದೃಢವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಎಸ್ಐಟಿ ತನಿಖಾಧಿಕಾರಿಗಳು ಉಲ್ಲೇಖಿಸಿದ್ದರು.

Tags:    

Similar News