ಶ್ರೀಮುರಳಿ ನಟನೆಯ 'ಬಘೀರ' ರಿಲೀಸ್ ಡೇಟ್ ಅನೌನ್ಸ್
ನಟ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ʼಬಘೀರʼ ಸಿನಿಮಾ ಅಕ್ಟೋಬರ್ 31ರಂದು ತೆರೆಗೆ ಬರಲಿದೆ. ಪ್ರಶಾಂತ್ ನೀಲ್ ಬರೆದ ಕಥೆಗೆ ಡಾಕ್ಟರ್ ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ.;
ನಟ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಬಘೀರ ಸಿನಿಮಾ ಅಕ್ಟೋಬರ್ 31ರಂದು ತೆರೆಗೆ ಬರಲಿದೆ. ಪ್ರಶಾಂತ್ ನೀಲ್ ಬರೆದ ಕಥೆಯನ್ನು ಡಾಕ್ಟರ್ ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಬಘೀರ ಸಿನಿಮಾ ಕನ್ನಡ ಸೇರಿದಂತೆ ಇತರೆ ಕೆಲ ಭಾಷೆಗಳಲ್ಲೂ ತೆರೆಗೆ ಬರಲಿದೆ.
‘ಬಘೀರ’ ಸಿನಿಮಾದ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಅನೌನ್ಸ್ ಮಾಡಿದೆ. ಶ್ರೀಮುರಳಿ ಸಿನಿಮಾವು ಅಕ್ಟೋಬರ್ 31ರಂದು ಬಿಡುಗಡೆ ಆಗಲಿದೆ. ವಿಶೇಷ ಅಂದ್ರೆ ಬಘೀರ ಸಿನಿಮಾ ಕನ್ನಡ ಅಷ್ಟೇ ಅಲ್ಲದೇ ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿಯೂ ಸಹ ತೆರೆಗೆ ಬರಲಿದೆ. ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ.
‘ಬಘೀರ’ ಸಿನಿಮಾದಲ್ಲಿ ಶ್ರೀಮುರಳಿಗೆ ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಪ್ರಕಾಶ್ ರೈ, ಅಚ್ಯುತ್ ಕುಮಾರ್, ರಂಗಾಯಣ ರಘು, ಗರುಡ ರಾಮ್ ಇನ್ನೂ ಮುಂತಾದ ತಾರಾಗಣವಿದೆ.
ಈ ಚಿತ್ರಕ್ಕೆ ಚೇತನ್ ಡಿಸೋಜ ಸಾಹಸ ನಿರ್ದೇಶನದ ಮಾಡಿದ್ದಾರೆ. ಎ.ಜೆ.ಶೆಟ್ಟಿ ಕ್ಯಾಮರಾ ವರ್ಕ್ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಯೋಗಿ ಜಿ ರಾಜ್ ಹಾಗೂ ಜಾಕಿ ಸಹ ನಿರ್ದೇಶನ ಸೇರಿದಂತೆ ದೊಡ್ಡ ತಂಡವೇ ಬಘೀರ ಚಿತ್ರಕ್ಕೆ ಕೆಲಸ ಮಾಡಿದೆ.