SSLC Exam Result | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಕಟ ; ಈ ಬಾರಿಯೂ ಬಾಲಕಿಯರೇ ಸ್ಟ್ರಾಂಗು !
ಎಸ್ಎಸ್ಎಲ್‌ಸಿ ಪರೀಕ್ಷೆಗೆ ಕುಳಿತ 45,5,444 ಗ್ರಾಮೀಣ ವಿದ್ಯಾರ್ಥಿಗಳಲ್ಲಿ 29,8,175ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ 33,5,446 ವಿದ್ಯಾರ್ಥಿಗಳಲ್ಲಿ 22,4,900 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 625ಕ್ಕೆ 625 ಅಂಕ ಗಳಿಸಿದ 22ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.;
2024-25ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಮತ್ತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶುಕ್ರವಾರ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಕಟಿಸಿದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರು ಶೇ 74 ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣರಾದರೆ, ಬಾಲಕರ ಉತ್ತೀರ್ಣ ಪ್ರಮಾಣ ಶೇ 58.07 ರಷ್ಟಿದೆ. ಒಟ್ಟಾರೆ ಫಲಿತಾಂಶ ಶೇ.66.14ರಷ್ಟು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಶೇ.91.12ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ.89.96ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ 83.19 ರಷ್ಟು, ಶಿವಮೊಗ್ಗ ಜಿಲ್ಲೆ 82.29 ಹಾಗೂ ಕೊಡಗು ಜಿಲ್ಲೆ 82.21 ರಷ್ಟು ಫಲಿತಾಂಶ ಪಡೆಯುವ ಮೂಲಕ ಮೊದಲ ಐದು ಸ್ಥಾನದಲ್ಲಿವೆ. ಶೇ. 42.43 ರಷ್ಟು ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ರಾಜ್ಯಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ಸುಮಾರು 8,42,173 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಈ ಪೈಕಿ 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದರು. ಇವರಲ್ಲಿ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ.
ಪರೀಕ್ಷೆಗೆ ಕುಳಿತಿದ್ದ 3,90,311 ಬಾಲಕರ ಪೈಕಿ 22,6,637ಮಂದಿ ಉತ್ತೀರ್ಣರಾಗಿದ್ದಾರೆ. 4,00,579 ಬಾಲಕಿಯರಲ್ಲಿ 29,6,438 ಮಂದಿ ಉತ್ತೀರ್ಣರಾಗಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಕುಳಿತ 45,5,444 ಗ್ರಾಮೀಣ ವಿದ್ಯಾರ್ಥಿಗಳಲ್ಲಿ 29,8,175ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ 33,5,446 ವಿದ್ಯಾರ್ಥಿಗಳಲ್ಲಿ 22,4,900 ವಿದ್ಯಾರ್ಥಿಗಳ ಮಾತ್ರ ತೇರ್ಗಡೆ ಹೊಂದಿದ್ದಾರೆ. 625ಕ್ಕೆ 625 ಅಂಕ ಗಳಿಸಿದ 22ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ರೀತಿ 624ಕ್ಕೆ 624 ಅಂಕ ಪಡೆದ 65 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
625ಕ್ಕೆ 625 ಅಂಕ ಪಡೆದವರು
ಬೆಳಗಾವಿ ಜಿಲ್ಲೆಯ ರೂಪ ಚನಗೌಡ ಪಾಟೀಲ, ಬೆಂಗಳೂರು ಗ್ರಾಮಂತರ ಜಿಲ್ಲೆಯ ಸಿ. ಭಾವನಾ ಹಾಗೂ ರಂಜಿತಾ ಎ.ಸಿ., ಶಿರಸಿ ನಗರದ ಶಗುಫ್ತಾ ಅಂಜುಮ್, ಮೈಸೂರಿನ ತನ್ಯಾ, ಧನುಷ್, ಚಿತ್ರದುರ್ಗದ ನಂದನ್, ಮೌಲ್ಯ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆಯ ಧನಲಕ್ಷ್ಮಿ ಎಂ., ಮಧುಸೂಧನ್ ರಾಜು ಎಸ್., ವಿಜಯಪುರದ ಅಖಿಲ್ ಅಹ್ಮದ್ ನದಾಫ್, ಮಂಡ್ಯದ ಧೃತಿ ಜೆ., ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಾಹ್ನವಿ, ನಮಿತಾ, ಯುಕ್ತಾ ಎಸ್., ತುಮಕೂರಿನ ಮೊಹಮದ್ ಮಸ್ತೂರ್ ಆದಿಲ್, ಶಿವಮೊಗ್ಗದ ಕೆ. ನಮನ, ಎನ್. ಸಹಿಷ್ಣು , ನಿತ್ಯಾ ಎಂ.ಕುಲಕರ್ಣಿ, ಉಡುಪಿಯ ಸ್ವಾತಿ ಕಾಮತ್, ಹಾಸನ್ನ ಉತ್ಸವ್ ಪಾಟೀಲ್, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಯಶ್ವಿತಾ ರೆಡ್ಡಿ ಕೆ.ಬಿ. ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.