ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ( ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.;
ಸಾಂದರ್ಭಿಕ ಚಿತ್ರ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ 2024-25ನೇ ಸಾಲಿನ ಎಸ್ಎಸ್ಎಲ್ಸಿ ಹಂತ 1ರ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಬೆಳಗ್ಗೆ 11. 30ಕ್ಕೆ ಬೆಂಗಳೂರಿನ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎಸ್ಎಲ್ಸಿ ಫಲಿತಾಂಶ ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.
KSEAB SSLC-1 ಫಲಿತಾಂಶ ನೋಡುವುದು ಹೇಗೆ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್ಎಸ್ಎಲ್ಸಿ ಅಥವಾ 10ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ.
karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
SSLC Result 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ.
Submit ಬಟನ್ ಮೇಲೆ ಕ್ಲಿಕ್ ಮಾಡಿ
ನಿಮ್ಮ ಫಲಿತಾಂಶವನ್ನು ಸ್ಕ್ರೀನ್ ಮೇಲೆ ತೋರಿಸುತ್ತದೆ, ನಿಮ್ಮ ವಿಷಯವಾರು ಅಂಕಗಳು ಮತ್ತು ಒಟ್ಟಾರೆ ಕಾರ್ಯಕ್ಷಮತೆಯನ್ನು ಪ್ರದರ್ಶಿಸುತ್ತದೆ.
ಬಳಿಕ, ಫಲಿತಾಂಶ ಅಂಕಪಟ್ಟಿಯ ಪ್ರಿಂಟ್ ತೆಗೆದುಕೊಳ್ಳಿ.