SSLC Result| ಬಾಗಲಕೋಟೆಯ ಅಂಕಿತಾ ಕೊನ್ನೂರ್ ರಾಜ್ಯಕ್ಕೆ ಪ್ರಥಮ, ವಿದ್ಯಾರ್ಥಿನಿಯರೇ ಮೇಲುಗೈ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ ಫಲಿತಾಂಶವು karresults.nic.in ವೆಬ್ಸೈಟ್ನಲ್ಲಿ ಪ್ರಕಟಗೊಳ್ಳಲಿದೆ.
ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದಿದ್ದವು.
ಫಲಿತಾಂಶ ನೋಡುವುದು ಹೇಗೆ?
ಕರ್ನಾಟಕ SSLC ಫಲಿತಾಂಶ 2024 ಅಂಕಪಟ್ಟಿ ಆನ್‌ಲೈನ್‌ನಲ್ಲಿ ಲಭ್ಯವಿರುತ್ತದೆ. ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.
ಹಂತ 1: KSEAB ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: ಕರ್ನಾಟಕ SSLC ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡಿ
ಹಂತ 4: ಮಾರ್ಕ್‌ಶೀಟ್ ಅನ್ನು ಪ್ರದರ್ಶಿಸಲಾಗುತ್ತದೆ
ಹಂತ 5: ಹೆಚ್ಚಿನ ಉಲ್ಲೇಖಕ್ಕಾಗಿ ಮಾರ್ಕ್‌ಶೀಟ್ ಅನ್ನು ಡೌನ್‌ಲೋಡ್ ಮಾಡಿ
ಜಿಲ್ಲಾವಾರು ಫಲಿತಾಂಶ ಇಲ್ಲಿದೆ:
ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.
ವಿದ್ಯಾರ್ಥಿನಿಯರೇ ಮೇಲುಗೈ
ಬಾಲಕರು: 2,87,416 (65.90%)
ಬಾಲಕಿಯರು; 3,43,788 (81.11%)
ಈ ಬಾರಿ ರಾಜ್ಯದ ಫಲಿತಾಂಶ ಕುಸಿತ
ರಾಜ್ಯದಲ್ಲಿ 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 2023-24 ನೇ ಸಾಲಿನ ಶೇಕಡಾವಾರು ಫಲಿತಾಂಶ 70.40ಕ್ಕೆ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.10 ಪರ್ಸೆಂಟ್ ಕುಸಿತವಾಗಿದೆ.
ಅತಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳ ವಿವಿರ
1)ಅಂಕಿತಾ ಬಸಪ್ಪ ಕೊನ್ನೂರು (625/625) (ರಾಜ್ಯಕ್ಕೆ ಫ್ರಥಮ)
ದ್ವೀತಿಯ ಸ್ಥಾನ 7 ವಿದ್ಯಾರ್ಥಿಗಳಿಗೆ ಹಂಚಿಕೆಯಾಗಿದೆ:
1) ಮೇದಾ ಪಿ ಶೆಟ್ಟಿ ( ಬೆಂಗಳೂರು) 624/625
2) ಹರ್ಷಿತಾ ಡಿಎಂ (ಮಧುಗಿರಿ)
3)ಚಿನ್ಮಯ್ (ದಕ್ಷಿಣ ಕನ್ನಡ)
4)ಸಿದ್ದಾಂತ್ (ಚಿಕ್ಕೊಡಿ )
5)ದರ್ಶನ್ (ಶಿರಸಿ)
6) ಚಿನ್ಮಯ್ (ಶಿರಸಿ)
7)ಶ್ರೀರಾಮ್ (ಶಿರಸಿ)
ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ ಸ್ಥಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರ ಮೊದಲನೇ ಸ್ಥಾನಗಳಿಸಿದ್ದಾರೆ. ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ. ಅಂಕಿತಾ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ. ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.
ದಕ್ಷಿಣ ಕನ್ನಡಕ್ಕೆ ಎರಡನೇ ಸ್ಥಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಗಳಿಸಿದೆ.
ಉಡುಪಿಗೆ ಮೊದಲ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ- ವಿದ್ಯಾರ್ಥಿನಿಯರೇ ಮೇಲುಗೈ
ಎಂದಿನಂತೆ ಈ ಬಾರಿಯೂ ಕೂಡ ಹೆಣ್ಣುಮಕ್ಕಳೇ ರಿಸಲ್ಟ್ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿಗೆ ರಾಜ್ಯದಲ್ಲಿ ಮೊದಲ ಸ್ಥಾನ ಸಿಕ್ಕಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ.
ಕಳೆದ ವರ್ಷದ ಫಲಿತಾಂಶ:
ಕಳೆದ ವರ್ಷ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಕರ್ನಾಟಕ SSLC 2023 ಪರೀಕ್ಷೆಗಳಲ್ಲಿ ಒಟ್ಟಾರೆ ಉತ್ತೀರ್ಣ ಶೇಕಡಾ 83.89%. ಈ ವರ್ಷ, ಕರ್ನಾಟಕ 10 ನೇ ತರಗತಿಯ ಒಟ್ಟಾರೆ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಮೇ 9, 2024 ರಂದು ಪ್ರಕಟಿಸಲಾಗುತ್ತಿದೆ.
ಇಂದು ಬೆಳಗ್ಗೆ 10.30ಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಇಂದು ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿ ನಡೆಯಲಿದೆ.