Bangalore Stampede | ಪೊಲೀಸ್‌ ಅಧಿಕಾರಿಗಳ ಅಮಾನತು; ಸರ್ಕಾರದ ನಡೆ ಪ್ರಶ್ನಿಸಿ ಸಿಎಟಿಗೆ ಅರ್ಜಿ

ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿದ ಸರ್ಕಾರದ ನಡೆ ಪ್ರಶ್ನಿಸಿ ಹೆಚ್ಚುವರಿ ಪೊಲೀಸ್‌ ಆಯುಕ್ತ ವಿಕಾಸ್‌ಕುಮಾರ್‌ ವಿಕಾಸ್‌ ಅವರು ಕೇಂದ್ರ ಆಡಳಿತ ನ್ಯಾಯಮಂಡಳಿಗೆ (ಸಿಎಟಿ) ಅರ್ಜಿ ಸಲ್ಲಿಸಿದ್ದಾರೆ.;

Update: 2025-06-09 14:21 GMT

ಹೆಚ್ಚುವರಿ ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ವಿಕಾಸ್‌

ಐಪಿಎಲ್‌ ಪಂದ್ಯದಲ್ಲಿ ಮೊದಲ ಬಾರಿಗೆ ಕಪ್‌ ಮುಡಿಗೇರಿಸಿಕೊಂಡ ಆರ್‌ಸಿಬಿ ಗೆಲುವಿನ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಭದ್ರತೆ ವೈಫಲ್ಯ ಹಿನ್ನೆಲೆಯಲ್ಲಿ ಸರ್ಕಾರವು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿದಂತೆ ಐವರನ್ನು ಅಮಾನತುಗೊಳಿಸಿದೆ. ಸರ್ಕಾರದ ನಡೆ ಇದೀಗ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೆಟ್ಟಿಲೇರಿದೆ. 

ಅಮಾನತುಗೊಂಡ ಅಧಿಕಾರಿಗಳ ಪೈಕಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್‌ ಕುಮಾರ್‌ ವಿಕಾಸ್‌ ಅವರು ಸಿಎಟಿ ಮೊರೆ ಹೋಗಿದ್ದಾರೆ. ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ.  ಸಿಎಟಿ ಇದರ ಬಗ್ಗೆ ವಿಚಾರಣೆ ನಡೆಸಲಿದೆ. 

ಆರ್‌ಸಿಬಿ ಗೆಲುವು ಸಂಭ್ರಮಿಸಲು ರಾಜ್ಯ ಸರ್ಕಾರ, ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಸಮಾರಂಭ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಹಮ್ಮಿಕೊಂಡಿತ್ತು. ಕಾರ್ಯಕ್ರಮ ವೀಕ್ಷಿಸಲು ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು.  35 ಸಾವಿರದಷ್ಟು ಆಸನಗಳಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳುಬಂದಿದ್ದರು. ಉಚಿತ ಪ್ರವೇಶ ಎಂದು ಭಾವಿಸಿ ಬಂದಿದ್ದ ಲಕ್ಷಾಂತರ ಜನರು ಕ್ರೀಡಾಂಗಣದಲ್ಲಿ ಒಮ್ಮೆಲೆ ನುಗ್ಗಿದ್ದರಿಂದ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ  ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. 

ಘಟನೆಯಲ್ಲಿ ಸರ್ಕಾರದ ವೈಫಲ್ಯಗಳಿದ್ದರೂ ಭದ್ರತೆ ಸರಿಯಾಗಿ ಒದಗಿಸಿಲ್ಲ ಎಂಬ ಕಾರಣಕ್ಕಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಯಿತು. ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಹೆಚ್‌.ಟಿ.ಶೇಖರ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್‌,  ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್‌ ಠಾಣೆ ಇನ್ಸ್‌ಪೆಕ್ಟರ್‌ ಗಿರೀಶ್‌.ಎ.ಕೆ ಅವರನ್ನು ಅಮಾನತು ಮಾಡಲಾಗಿದೆ. 

ಅಮಾನತುಗೊಂಡ ಅಧಿಕಾರಿಗಳ ಪೈಕಿ ವಿಕಾಸ್‌ಕುಮಾಸ್‌ ವಿಕಾಸ್‌ ಮಾತ್ರ ಸಿಎಟಿ ಮೊರೆ ಹೋಗಿದ್ದಾರೆ. ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯು ನ್ಯಾಯಮಂಡಳಿ ವಿಚಾರಣೆ ನಡೆಸಲಿದೆ. 

Tags:    

Similar News