ರಾಜ್ಯ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದ ಶೇ.80 ಪ್ರಕರಣ ಇತ್ಯರ್ಥ: ಸಚಿವ ಕೃಷ್ಣಬೈರೇಗೌಡ

ಹೆಚ್ಚು ಪ್ರಕರಣಗಳು ಬಾಕಿ ಇರುವ ಜಿಲ್ಲೆಗಳಲ್ಲಿನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಮೇಲ್ಮನವಿ ಪ್ರಕರಣಗಳನ್ನು ಎಸಿ ವೃಂದಕ್ಕೆ ಸಮಾನಾಂತರ ವೃಂದದ ಇತರೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

Update: 2025-12-17 13:01 GMT

ಕಂದಾಯ ಸಚಿವ ಕೃಷ್ಣ ಬೈರೇಗೌಡ

Click the Play button to listen to article

ಸರ್ಕಾರದ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ಶೆ.80ರಷ್ಟು ವಿಲೇವಾರಿ ಮಾಡಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಸಹ ಇತ್ಯರ್ಥಗೊಳಿಸಲು ಸರ್ಕಾರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಬುಧವಾರ (ಡಿ.17)ರಂದು ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ರಾಮೋಜಿ ಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೆಚ್ಚು ಪ್ರಕರಣಗಳು ಬಾಕಿ ಇರುವ ಜಿಲ್ಲೆಗಳಲ್ಲಿನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಮೇಲ್ಮನವಿ ಪ್ರಕರಣಗಳನ್ನು ಉಪ ವಿಭಾಗಾಧಿಕಾರಿ ವೃಂದಕ್ಕೆ ಸಮಾನಾಂತರ ವೃಂದದ ಇತರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿಗಳಿಗೆ ಕಾರ್ಯಹಂಚಿಕೆ ಮಾಡಿ ಸರ್ಕಾರವು ಆದೇಶಿಸಿದೆ ಎಂದರು.

ಕಂದಾಯ ನ್ಯಾಯಲಯಗಳ ನಿರ್ವಹಣೆಯಲ್ಲಿ ಪಾರದರ್ಶಕತೆ, ದಕ್ಷತೆ, ಸಕಾಲಿಕ ವಿಲೇವಾರಿ ಮತ್ತು ಲಭ್ಯತೆಯ ಹಿತದೃಷ್ಟಿಯಿಂದ ಡಿಜಿಟಲ್ ಸಹಿ ಮೂಲಕ ಎಲ್ಲಾ ಆನ್‍ಲೈನ್ ಫೈಲಿಂಗ್ ಮತ್ತು ಎಲೆಕ್ಟ್ರಾನಿಕ್ ನಿರ್ವಹಣೆಯನ್ನು ಒದಗಿಸುವುದು ಸೂಕ್ತವೆಂದು ಪರಿಗಣಿಸಿ ಕರ್ನಾಟಕ ಕಂದಾಯ ನ್ಯಾಯಾಲಯದ ನಡವಳಿಗಳು (ಆನ್‍ಲೈನ್ ಸಲ್ಲಿಕೆ, ದೃಢೀಕರಣ ಮತ್ತು ಡಿಜಿಟಲೀಕರಣ) ಸರ್ಕಾರವು ಆ.29ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದರಿಂದಾಗಿ ಕಂದಾಯ ನ್ಯಾಯಾಲಯಗಳು ನಿರ್ವಹಣೆಯನ್ನು ಕಡ್ಡಾಯವಾಗಿ ಆರ್‌ಸಿಎಂಎಸ್‌ ತಂತ್ರಾಂಶದಲ್ಲಿಯೇ ನಿರ್ದೇಶಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಕಾವೇರಿ-2 ಡೇಟಾ ಲಿಂಕ್‌ಗೆ ತ್ವರಿತ ಪರಿಹಾರ

ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು.  ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್‌ಟಿಸಿ, ಮೋಜಿಣಿ ನಕ್ಷೆ, ಇ- ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್‌ಎಮ್‌ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು, 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು ನೋಂದಣಿ ಆಗಿವೆ ಎಂದರು. 

ಬಸವ ಮ್ಯೂಸಿಯಂಗೆ 64.43 ಕೋಟಿ ರೂ. ಬಿಡುಗಡೆ

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತದಿಂದ 64.43 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇದುವರೆಗೂ 54.82 ಕೋಟಿ ರೂ. ಬಳಕೆ ಮಾಡಲಾಗಿದೆ. ಬಸವ ಅಂತಾರಾಷ್ಟ್ರೀಯ ಕೇಂದ್ರದ ಸಿವಿಲ್ ಕಾಮಗಾರಿಯ ಎ, ಬಿ, ಸಿ ಮತ್ತು ಎಫ್ ಬ್ಲಾಕ್‍ಗಳ ಕಾಮಗಾರಿ ಮುಕ್ತಾಯವಾಗಿದ್ದು, ಬಾಕಿ ಉಳಿದ ಡಿ ಮತ್ತು ಇ ಬ್ಲಾಕ್‍ಗಳ ಕಾಮಗಾರಿಗಳ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಕಟ್ಟಡದ ಸಿವಿಲ್ ಕಾಮಗಾರಿಗಳು ಮುಕ್ತಾಯಗೊಂಡ ನಂತರ ಕಟ್ಟಡಗಳಲ್ಲಿ ಬಾಕಿ ಉಳಿದ ವಿದ್ಯುತ್, ಧ್ವನಿ ಮತ್ತು ಬೆಳಕು ಆಧುನಿಕ ಶೈಲಿಯ 3ಡಿ, ಮಲ್ಟಿಮಿಡಿಯಾ ತಂತ್ರಜ್ಞಾನ ಮತ್ತು ಐನಿಮ್ಯಾಟ್ರಿಕ್ಸ್ ಸೇರಿದಂತೆ ಇತ್ಯಾದಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದರು.

Tags:    

Similar News