ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪಿಸಿ ಅಧಿಕಾರಿ ಆತ್ಮಹತ್ಯೆ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿ ತಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಎನ್ನುವವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದ ಕೆಂಚಪ್ಪ ಲೇಔಟ್ ನ ನಿವಾಸದಲ್ಲಿ ನಡೆದಿದೆ. ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬರೋಬ್ಬರಿ 187 ಕೋಟಿ ರೂ. ಹಗರಣ ನಡೆದಿದೆ. ಈ ಪೈಕಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳು ಮಾಡಿದ ತಪ್ಪು ನನ್ನ ಮೇಲೆ ಹಾಕುತ್ತಿದ್ದಾರೆ, ನನ್ನ ಸಾವಿಗೆ ಪದ್ಮಾನಾಭ, ಪರಶುರಾಮ್, ಶುಚಿಸ್ವತ ಅಧಿಕಾರಿಗಳೇ ಕಾರಣ ಎಂದು 6 ಪುಟಗಳ ʼಡೆತ್ ನೋಟ್ʼ ನಲ್ಲಿ ಬರೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಬಿಜೆಪಿ ವಾಗ್ದಾಳಿB
ಇದು ಆತ್ಮಹತ್ಯೆಯಲ್ಲ ಸರ್ಕಾರದಿಂದ ನಡೆದ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ʻʻವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರʼʼ ಎಂದು ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ @INCKarnataka ಸರ್ಕಾರ.
— R. Ashoka (ಮೋದಿ ಅವರ ಕುಟುಂಬ) (@RAshokaBJP) May 27, 2024
ಸಿಎಂ @siddaramaiah ನವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ… pic.twitter.com/iEuUcsnrUG
ʻʻಸಿಎಂ ಸಿದ್ದರಾಮಯ್ಯನವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ʻʻಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನ ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿʼʼ ಕಿಡಿಕಾರಿದ್ದಾರೆ.
ʻʻಎಂ ಸಿದ್ದರಾಮಯ್ಯನವರೇ, ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿ ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿʼʼ ಎಂದು ಒತ್ತಾಯ ಮಾಡಿದ್ದಾರೆ.