ಸುಪ್ರೀಂಕೋರ್ಟ್ ತಡೆಯಾಜ್ಞೆ | 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಮುಂದಕ್ಕೆ
ಹೈಕೋರ್ಟ್ ತೀರ್ಪು ಪ್ರಶ್ನಿಸಿ ರುಪ್ಸಾ, ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆ ಪೂರ್ಣಗೊಳ್ಳುವವರೆಗೆ ಪರೀಕ್ಷೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ, ರಾಜ್ಯ ಸರ್ಕಾರ ಮಾರ್ಚ್ ೧೩ರಿಂದ ಮುಂದುವರಿಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ.;
ಹೈಕೋರ್ಟ್ ತಡೆಯಾಜ್ಞೆ ಮತ್ತು ತೆರವಿನ ಬಳಿಕ ಸೋಮವಾರದಿಂದ ಆರಂಭವಾಗಿದ್ದ ೫, ೮ ಮತ್ತು ೯ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂಕೋರ್ಟ್ ಮತ್ತೆ ತಡೆಯಾಜ್ಞೆ ನೀಡಿದೆ.
ನ್ಯಾಯಾಲಯದ ಆದೇಶದ ಬೆನ್ನಲ್ಲೇ ಮಾರ್ಚ್ ೧೩ರಂದು ಬುಧವಾರ ನಡೆಯಬೇಕಿದ್ದ ಎಲ್ಲಾ ತರಗತಿಗಳ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಡ್ಡಾಯ ಶಿಕ್ಷಣ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಆಧಾರದ ಮೇಲೆ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸಾ) ೫, ೮ ಮತ್ತು ೯ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಕಳೆದ ಗುರುವಾರ, ಪರೀಕ್ಷೆಗೆ ನಾಲ್ಕು ದಿನ ಇರುವಾಗ ರದ್ದು ಆದೇಶ ನೀಡಿತ್ತು. ಆದರೆ, ರಾಜ್ಯ ಸರ್ಕಾರ ತೀರ್ಪು ಪುನರ್ ಪರಿಶೀಲನೆ ಕೋರಿ ರಿಟ್ ಸಲ್ಲಿಸಿತ್ತು. ಮಾರನೇ ದಿನವೇ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪರೀಕ್ಷೆಗೆ ಎಲ್ಲಾ ತಯಾರಿ ಮಾಡಿಕೊಂಡಿರುವ ಅಂಶವನ್ನು ಪರಿಗಣಿಸಿ, ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.
ಆದರೆ, ಹೈಕೋರ್ಟ್ ತೀರ್ಪು ಪ್ರಶ್ನಿಸಿ ರುಪ್ಸಾ, ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಚಾರಣೆ ಪೂರ್ಣಗೊಳ್ಳುವವರೆಗೆ ಪರೀಕ್ಷೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ, ರಾಜ್ಯ ಸರ್ಕಾರ ಮಾರ್ಚ್ ೧೩ರಿಂದ ಮುಂದುವರಿಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ.