ಲೋಕಸಭಾ ಫಲಿತಾಂಶದ ಬಳಿಕ ತಾ.ಪಂ, ಜಿ.ಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Update: 2024-05-24 09:58 GMT

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʻʻಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡಣೆ ಆಗುತ್ತದೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆʼʼ ಎಂದು ತಿಳಿಸಿದರು.

ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಲು ಒತ್ತಡವಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ʻʻಹೈಕಮಾಂಡ್ ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ನನಗೆ ಗೊತ್ತಿಲ್ಲ. ಕಳೆದ ಬಾರಿ ನಾನು ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಯತೀಂದ್ರೆಗೆ ಹೈಕಮಾಂಡ್ ಸೂಚಿಸಿತ್ತು. ಈಗ ಏನು ಮಾಡುತ್ತಾರೋ ತಿಳಿದಿಲ್ಲʼʼ ಎಂದರು.

Tags:    

Similar News