ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನ ಬಂಧನ
8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.;
ಬಂಧಿತ ಶಿಕ್ಷಕ
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಅತಿಥಿ ಶಿಕ್ಷಕನನ್ನು ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಶಿವರಾಜ ಹಣಮಂತ (32) ಬಂಧಿತ ಶಿಕ್ಷಕ.
8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ತಾಯಿ ಯುಗಾದಿ ಹಬ್ಬಕ್ಕೆ ಮೂವರು ಮಕ್ಕಳನ್ನು ಕರೆದುಕೊಂಡು ತವರು ಮನೆಗೆ ಹೋಗಿದ್ದರು. ಪರೀಕ್ಷೆಯ ಕಾರಣಕ್ಕೆ ಸಂತ್ರಸ್ತ ಬಾಲಕಿ ಮನೆಯಲ್ಲಿಯೇ ಉಳಿದಿದ್ದಳು. ಅದೇ ಗ್ರಾಮದಲ್ಲಿನ ಅಜ್ಜಿಯ ಮನೆಗೆ ಹೋಗಿದ್ದ ಬಾಲಕಿ, ಸಂಜೆ ವಾಪಸ್ ಬಂದು ಮನೆಯಲ್ಲಿ ಟಿ.ವಿ. ನೋಡುತ್ತಿದ್ದಳು. ಈ ವೇಳೆ ಶಿವರಾಜ, ಮನೆಗೆ ನುಗ್ಗಿದ್ದ. ಹೆದರಿದ ಬಾಲಕಿಯ ಸ್ನೇಹಿತರು ಹೊರಗೆ ಹೋಗಿದ್ದರು.
ಬಳಿಕ ಬಾಲಕಿಗೆ ಪ್ರೀತಿಸುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ಪೋಷಕರು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಬಾಲಕಿಗೆ ಪ್ರಜ್ಞೆ ಬಂದಾಗ ನಡೆದ ಕೃತ್ಯದ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ.