ಬ್ರಹ್ಮಗಂಟು ಖ್ಯಾತಿಯ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ
ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರಾದ ಶೋಭಿತಾ ಎರಡು ವರ್ಷಗಳ ಹಿಂದೆ ಮದುವೆಯಾಗಿ ಪತಿಯೊಂದಿಗೆ ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಶನಿವಾರ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.;
ಕನ್ನಡದ ಖ್ಯಾತ ಕಿರುತೆರೆ ನಟಿ, ಬ್ರಹ್ಮಗಂಟು ಧಾರಾವಾಹಿಯ ಶೋಭಿತಾ ಶಿವಣ್ಣ ಹೈದರಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ,
ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರಾದ ಶೋಭಿತಾ ಎರಡು ವರ್ಷಗಳ ಹಿಂದೆ ಮದುವೆಯಾಗಿ ಪತಿಯೊಂದಿಗೆ ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಶನಿವಾರ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ. ಶೋಭಿತಾ ಸಾವಿನ ಸುದ್ದಿ ಕನ್ನಡ ಕಿರುತೆರೆಯಲ್ಲಿ ತಲ್ಲಣ ಮೂಡಿಸಿದೆ. ನಟಿ ಶೋಭಿತಾ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹೈದರಾಬಾದ್‌ಗೆ ತೆರಳಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಬೆಂಗಳೂರಿಗೆ ತರುವ ಸಾಧ್ದಯತೆ ಇದೆ ಎಂದು ತಿಳಿದು ಬಂದಿದೆ.
ಶೋಭಿತಾ ಶಿವಣ್ಣ ಬೆಳ್ಳಿತೆರೆ ಅಲ್ಲದೇ ವಂದನಾ, 'ಅಟೆಂಪ್ಟ್ ಟು ಮರ್ಡರ್, 'ಜಾಕ್‌ಪಾಟ್, ಫಸ್ಟ್ ಡೇ ಫಸ್ಟ್ ಶೋ' ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಮೀನಾಕ್ಷಿ ಮದುವೆ, ಕೋಗಿಲೆ, 'ಗಾಳಿಪಟ, ದೀಪವೂ ನಿನ್ನದೇ ಗಾಳಿಯು ನಿನ್ನದೇ ಧಾರಾವಾಹಿಯಲ್ಲೂ ನಟನೆ ಮಾಡಿದ್ದರು. ಬ್ರಹ್ಮಗಂಟು ಧಾರವಾಹಿಯಲ್ಲಿ ಹೆಚ್ಚು ಚಿರಪರಿಚಿತರಾಗಿದ್ದರು.
ಆತ್ಮಹತ್ಯೆಗೂ ಮುನ್ನ ಶೋಭಿತಾ ಪೋಟೋವೊಂದನ್ನು ಶೇರ್ ಮಾಡಿದ್ದಾರೆ. ಅದರ ಬಳಿಕವೇ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಕನ್ನಡ ಚಿತ್ರರಂಗ ಖ್ಯಾತ ನಿರ್ದೇಶಕರಾಗಿದ್ದ ಗುರುಪ್ರಸಾದ್ ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮೃತದೇಹ ಅಪಾರ್ಟ್‌ಮೆಂಟ್ ಕೊಠಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.