Accident| ಯಾದಗಿರಿಯಲ್ಲಿ ಬೊಲೆರೊ-ಬಸ್ ಮಧ್ಯೆ ಭೀಕರ ಅಪಘಾತ ; ನಾಲ್ವರು ದುರ್ಮರಣ
ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಂಬಂಧಿಕರೊಬ್ಬರ ಮಗುವಿನ ಜವಳ ಕಾರ್ಯ( ಕೇಶ ಮುಂಡನ ) ಕಾರ್ಯಕ್ರಮಕ್ಕೆ ಕುಟುಂಬಸ್ಥರು ತೆರಳುತ್ತಿದ್ದರು. ಈ ವೇಳೆ ಕಲಬುರಗಿ ಮಾರ್ಗವಾಗಿ ಬರುತ್ತಿದ್ದ ಸಾರಿಗೆ ಬಸ್ ಹಾಗೂ ಬೊಲೆರೊ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ.;
ಬೊಲೆರೊ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿ ನಡೆದಿದೆ.
ಇಲ್ಲಿನ ರಾಷ್ಟ್ರೀಯ ಹೆದ್ದಾರಿ-150ಎ ನಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಮೃತರನ್ನು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ ಬೊಲೆರೊ ಚಾಲಕ ಶರಣಪ್ಪ(30), ಸುನೀತಾ(19), ಸೋಮವ್ವ(50) ಹಾಗೂ ತಂಗಮ್ಮ(55) ಎಂದು ಗುರುತಿಸಲಾಗಿದೆ.
ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಂಬಂಧಿಕರೊಬ್ಬರ ಮಗುವಿನ ಜವಳ ಕಾರ್ಯ( ಕೇಶ ಮುಂಡನ ) ಕಾರ್ಯಕ್ರಮಕ್ಕೆ ಕುಟುಂಬಸ್ಥರು ತೆರಳುತ್ತಿದ್ದರು. ಈ ವೇಳೆ ಕಲಬುರಗಿ ಮಾರ್ಗವಾಗಿ ಬರುತ್ತಿದ್ದ ಸಾರಿಗೆ ಬಸ್ ಹಾಗೂ ಬೊಲೆರೊ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಒಟ್ಟು 12 ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು.
ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ರಾತ್ರಿಯಷ್ಟೇ ತುಮಕೂರು ಸಮೀಪದ ದಾಬಸ್ ಪೇಟೆ ಬಳಿ ಕಾರು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು.