Tumkur Accident| ತುಮಕೂರಿನಲ್ಲಿ ಭೀಕರ ಅಪಘಾತ: ಮೂವರು ಬೈಕ್ ಸವಾರರ ಸಾವು
ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ. ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.;
By : The Federal
Update: 2025-06-06 06:09 GMT
ಸಾಂದರ್ಭಿಕ ಚಿತ್ರ
ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ. ಪೆಟ್ರೋಲ್ ಬಂಕ್‌ನಿಂದ ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ಧನಂಜಯ್ (27), ಮತ್ತು ಧನುಷ್ (23)** ಎಂದು ಗುರುತಿಸಲಾಗಿದೆ. ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸದ್ಯ, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಎಎಸ್‌ಪಿ ಗೋಪಾಲ್ ಮತ್ತು ಡಿವೈಎಸ್‌ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.