Pahalgam Terror Attack |ಗುಂಡಿಗೆ ಬಲಿಯಾದ ಮಂಜುನಾಥ್, ಭರತ್, ಮಧುಸೂದನ್ ಅಂತಿಮ ಯಾತ್ರೆ
ಪಹಲ್ಗಾಮ್‌ನಲ್ಲಿ ನಡೆದ ಪಾಕಿಸ್ತಾನ ಪ್ರಚೋದಿತ ಉಗ್ರರ ಅಟ್ಟಹಾಸದಲ್ಲಿ ಬಲಿಯಾದ ಕರ್ನಾಟಕ ಮೂಲದವರಲ್ಲಿ ಇಬ್ಬರ ಪಾರ್ಥಿವ ಶರೀರಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಗುರುವಾರ ಬೆಳಿಗ್ಗೆ ತರಲಾಗಿದೆ. ಬೆಂಗಳೂರು ವಾಸಿಯಾಗಿರುವ ಇನ್ನೊಬ್ಬರ ಶರೀರವನ್ನು ಅವರ ಆಂಧ್ರಪ್ರದೇಶದ ನೆಲ್ಲೂರಿನ ನಿವಾಸಕ್ಕೆ ಕಳುಹಿಸಲಾಗಿದೆ.;
ಪಹಲ್ಗಾಮ್‌ನಲ್ಲಿ ನಡೆದ ಪಾಕಿಸ್ತಾನ ಪ್ರಚೋದಿತ ಉಗ್ರರ ಅಟ್ಟಹಾಸದಲ್ಲಿ ಬಲಿಯಾದ ಕರ್ನಾಟಕ ಮೂಲದವರಲ್ಲಿ ಇಬ್ಬರ ಪಾರ್ಥಿವ ಶರೀರಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಗುರುವಾರ ಬೆಳಿಗ್ಗೆ ತರಲಾಗಿದೆ. ಬೆಂಗಳೂರು ವಾಸಿಯಾಗಿರುವ ಇನ್ನೊಬ್ಬರ ಶರೀರವನ್ನು ಅವರ ಆಂಧ್ರಪ್ರದೇಶದ ನೆಲ್ಲೂರಿನ ನಿವಾಸಕ್ಕೆ ಕಳುಹಿಸಲಾಗಿದೆ.
ಅವರವರ ಮನೆಗಳಿಗೆ ಪಾರ್ಥಿವ ಶರೀರಗಳನ್ನು ತಲುಪಿಸಲಾಗಿದ್ದು, ಸಾಂಪ್ರದಾಯಿಕ ವಿಧಿವಿಧಾನಗಳ ಮೂಲಕ ಅಂತಿಮ ಕಾರ್ಯಗಳನ್ನು ನಡೆಸಲು ಸಿದ್ಧತೆ ನಡೆದಿದೆ. ಜತೆಗೆ, ಸರ್ಕಾರದಿಂದಲೂ ಗೌರವ ರಕ್ಷೆ ಸಲ್ಲಿಸಲು ನಿರ್ಧರಿಸಲಾಗಿದೆ.
ಮಂಜುನಾಥ್ ಅವರ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಭರತ್ ಭೂಷಣ್ ಅವರ ಶರೀರವನ್ನು ಬೆಂಗಳೂರಿನ ಮತ್ತಿಕೆರೆ ನಿವಾಸಕ್ಕೆ ತಲುಪಿಸಲಾಗಿದೆ. ದಾಳಿಯಲ್ಲಿ ಮೃತಪಟ್ಟಿರುವ ಇನ್ನೊಬ್ಬರು ಬೆಂಗಳೂರು ವಾಸಿ , ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಧುಸೂಧನ್ ಸೋಮಿಶೆಟ್ಟಿ (44) ಅವರ ಪಾರ್ಥಿವ ಶರೀರವನ್ನು ಮೃತದೇಹವನ್ನು ಆಂಧ್ರಪ್ರದೇಶದ ನೆಲ್ಲೂರಿಗೆ ನೇರವಾಗಿ ಒಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಡುಗಟ್ಟಿದ ನೋವು
ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಕುಟುಂಬದವರ ಸಮ್ಮುಖದಲ್ಲಿ ಅಧಿಕಾರಿಗಳು ಭರತ್ ಅವರ ಮತ್ತಿಕೆರೆ ನಿವಾಸಕ್ಕೆ ಆಂಬುಲೆನ್ಸ್‌ನಲ್ಲಿ ತಲುಪಿಸಿದರು. ಭರತ್ ಅವರ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಪಾರ್ಥಿವ ಶರೀರಗಳ ಜತೆ ಕುಟುಂಬದ ಸದಸ್ಯರನ್ನು ಶ್ರೀನಗರದಿಂದ ಬೆಂಗಳೂರಿಗೆ ಕರೆತರುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿತ್ತು. ಮಂಜುನಾಥ ರಾವ್ ಹಾಗೂ ಭರತ್ ಭೂಷಣ್ ಅವರ ಕುಟುಂಬದವರ ಜೊತೆ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಜತೆಯಾಗಿದ್ದರು.
ಎರಡೂ ಕುಟುಂಬಗಳ ಒಟ್ಟು 13 ಮಂದಿ ಸದಸ್ಯರು ಇಂಡಿಗೊ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ತಮ್ಮ ಸ್ಥಳಗಳಿಗೆ ತೆರಳಿದ್ದಾರೆ.
ದಾಳಿಯಲ್ಲಿ ಮೃತಪಟ್ಟಿರುವ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಧುಸೂದನ್ ಸೋಮಿಶೆಟ್ಟಿ ರಾವ್ (44) ಅವರ ಮೃತದೇಹವನ್ನು ಆಂಧ್ರಪ್ರದೇಶದ ನೆಲ್ಲೂರಿಗೆ ತಲುಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮಿಶೆಟ್ಟಿ ರಾವ್ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನೆಲಸಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಸ್ಥಳೀಯ ಕೆಲ ವ್ಯಕ್ತಿಗಳು ಸೇರಿ 28 ಜನ ಮೃತಪಟ್ಟಿದ್ದಾರೆ
ಟೆಕ್ಕಿ ಭರತ್ ಭೂಷಣ್
ಕಾಶ್ಮೀರದಲ್ಲಿ ನಡೆದ ಉಗ್ರರ ಅಟ್ಟಹಾದಲ್ಲಿ ಪ್ರವಾಸಕ್ಕಾಗಿ ಕಾಶೀರಕ್ಕೆ ತೆರಳಿದ್ದ ಮತ್ತಿಕೆರೆಯ ಟೆಕ್ಕಿ ಭರತ್ ಭೂಷಣ್ ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ಕಳೆದ ಶುಕ್ರವಾರ ಭರತ್ ಭೂಷಣ್ಮ ಪತ್ನಿ,
ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಪಹಲ್ಗಾಮ್‌ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್‌ಗೆ ಉಗ್ರರು ನೇರ ಶೂಟ್ ಮಾಡಿದ್ದಾರೆ.
ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು, ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ಕೂಡಲೇ ಭೂಷಣ್ ಪರಿಶೀಲಿಸಿದ ಪತ್ನಿ, ಭೂಷಣ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಭರತ್ ಕಳೆದ ಎಂಟು ವರ್ಷದ ಹಿಂದೆ ಮತ್ತಿಕೆರೆ ಮೂಲದ ಯುವತಿಯನ್ನು ಮದುವೆಯಾಗಿದ್ದರು.
ಸ್ವಂತ ಬ್ಯುಸಿನೆಸ್ ಆಲೋಚನೆ
ಟೆಕ್ಕಿಯಾಗಿದ್ದ ಭರತ್ ಇತ್ತೀಚಿಗೆ ಕೆಲಸ ಬಿಟ್ಟು ಬಿಸಿನೆಸ್ ಆರಂಭಿಸುವ ಚಿಂತನೆಯಲ್ಲಿದ್ದರು. ಅದರಂತೆ ಕೆಲಸ ಬಿಟ್ಟಿದ್ದ ಕಾರಣ ರಜೆಯಿದ್ದಿದ್ದರಿಂದ ಮಗುವಿಗೆ ಕಾಶ್ಮೀರ ತೋರಿಸಬೇಕೆಂಬ ಕಾರಣಕ್ಕೆ ಪ್ರವಾಸ ಕೈಗೊಂಡಿದ್ದರು. ಆದರೆ ದುರಾದೃಷ್ಟವಶಾತ್ ಉಗ್ರರ ಬಂದೂಕಿನ ಗುಂಡೇಟಿಗೆ ಭರತ್ ಉಸಿರು ಚೆಲ್ಲಿದ್ದಾರೆ.
ಪ್ರಸ್ತುತ ಮತ್ತಿಕೆರೆಯ ಸುಂದರ ನಗರದಲ್ಲಿರುವ ಅವರ ನಿವಾಸದಲ್ಲಿ ಅವರ ತಂದೆ -ತಾಯಿ ಇದ್ದು ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದರೆ ಆಘಾತಕೊಳಗಾಗುತ್ತಾರೆ ಎಂದು ಮಾಹಿತಿಯನ್ನು ಕೊನೆವರೆಗೆ ತಿಳಿಸಿಲ್ಲವಾದರೂ, ವೈದ್ಯರ ಸಹಾಯ ಪಡೆದು ಗುರುವಾರ ಮಾಹಿತಿ ನೀಡಲಾಗಿದೆ.
ರಾಮಮೂರ್ತಿ ನಗರದ ನಿವಾಸಿ ಮಧು ದುರಂತ ಸಾವು
ದಕ್ಷಿಣ ಕಾಶ್ಮೀರದಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲಿ ನಗರದ ಮಧು ಸೂದನ್ ರಾವ್ ಎಂಬುವರು ಬಲಿ ಯಾಗಿದ್ದಾರೆ.ಮೂಲತಃ ಆಂಧ್ರದ ನೆಲ್ಲೂರು ಜಿಲ್ಲೆಯ ಕಾವಲಿ ಗ್ರಾಮದವರಾದ ಮಧುಸೂದನ್ ನಗರದ ಸಾಫ್ಟ್ ವೇರ್ ಸಂಸ್ಥೆಯೊಂದರಲ್ಲಿ ಟೆಕ್ಕಿಯಾಗಿದ್ದು, ರಾಮಮೂರ್ತಿ ನಗರದ ಕಲ್ಕೆರೆಯಲ್ಲಿ ವಾಸವಾಗಿದ್ದರು.
ಪತ್ನಿ ಹಾಗೂ ತಮ ಇಬ್ಬರು ಮಕ್ಕಳೊಂದಿಗೆ ಎರಡು ದಿನದ ಹಿಂದೆ ಪತ್ನಿಯ ಸ್ನೇಹ ವರ್ಗದವರೊಂದಿಗೆ ಬೇಸಿಗೆ ರಜೆ ಕಳೆಯಲು ಕಾಶ್ಮೀರಕ್ಕೆ ತೆರಳಿದ್ದರು.ಮಿನಿ ಸ್ವಿಜರ್‌ಲ್ಯಾಂಡ್ ಪಹಲ್ಗಾಮ್‌ಗೆ ಕುದುರೆ ಮೇಲೆ ತೆರಳಿ ಪ್ರವಾಸ ಮುಗಿಸಿ ಒಂದು ಸ್ಥಳದಲ್ಲಿ ಜತೆಯಲ್ಲಿದ್ದವರೆಲ್ಲಾ ಕುಳಿತಿದ್ದಾಗ ಮಧುಸೂದನ್ ಊಟ ತರುವುದಾಗಿ ಹೇಳಿ ಹೋಗಿ ಉಗ್ರರ ಗುಂಡಿಗೆ ಬಲಿಯಾಗಿ ಸಾವನ್ನಪ್ಪಿದ್ದಾರೆ.
ಊಟ ತರಲು ಹೋದ ನನ್ನ ಪತಿಯ ತಲೆಗೆ ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಅವರ ಪತ್ನಿ ಅಲ್ಲಿನ ಪೊಲೀಸರಿಗೆ ಧೃಡಪಡಿಸಿದ್ದಾರೆ.ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್, ಭರತ್ ಭೂಷಣ್ ಹಾಗೂ ಮಧುಸೂದನ್ ಅವರ ಸಾವಿನೊಂದಿಗೆ ರಾಜ್ಯದ ಮೂವರು ಉಗ್ರರ ದಾಳಿಗೆ ಬಲಿಯಾದಂತಾಗಿದೆ.
ಮಗ ದ್ವಿತೀಯ ಪಿಯುನಲ್ಲಿ ಶೇ. 97 ಅಂಕ ಕಾಶೀರದಲ್ಲಿ ಸಂಭ್ರಮಕ್ಕೆ ತೆರಳಿದ್ದರು!
ಕಾಶೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಮ ಮಗ 97% ಅಂಕ ಗಳಿಸಿದ್ದ ಹೀಗಾಗಿ ಸಂಭ್ರಮಾಚರಣೆ ಮಾಡಲು 48 ವರ್ಷದ ಮಂಜುನಾಥ್ ತನ್ನ ಪತ್ನಿ ಮತ್ತು ಮಗನೊಂದಿಗೆ ಕಾಶೀರಕ್ಕೆ ಹೋಗಿದ್ದರು.
ಮಂಜುನಾಥ್ ಮತ್ತು ಅವರ ಕುಟುಂಬ ಸದಸ್ಯರು ಏಪ್ರಿಲ್ 19ರಂದು ಕಾಶೀರಕ್ಕೆ ತೆರಳಿದ್ದರು. ನಾಳೆ ಶಿವಮೊಗ್ಗಕ್ಕೆ ಹಿಂತಿರುಗಬೇಕಿತ್ತು. ಪ್ರವಾಸವನ್ನು ಏಜೆನ್ಸಿಯ ಮೂಲಕ ಬುಕ್ ಮಾಡಲಾಗಿತ್ತು ಎಂದು ಕುಟುಂಬದ ಆಪ್ತ ಮೂಲಗಳು ಟಿಎನ್‌ಐಇಗೆ ತಿಳಿಸಿವೆ. ಭಯೋತ್ಪಾದಕರು ನನ್ನ ಗಂಡನನ್ನು ನನ್ನ ಕಣ್ಣೆದುರೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಮಂಜುನಾಥ್‌ರವರ ಪತ್ನಿ ಪಲ್ಲವಿ ಸುದ್ದಿ ವಾಹಿನಿಗಳಿಗೆ ತಿಳಿಸಿದ್ದಾರೆ.
ನನ್ನ ಮಗ ಬೆಳಿಗ್ಗೆಯಿಂದ ಏನನ್ನೂ ತಿಂದಿರಲಿಲ್ಲ. ಹೀಗಾಗಿ ನನ್ನ ಪತಿ ಅಂಗಡಿಯವನೊಂದಿಗೆ ಮಾತನಾಡುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದರು. ಅವರ ತಲೆಗೆ ಗುಂಡು ಬಿತ್ತು, ಮೂರರಿಂದ ನಾಲ್ಕು ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದರು. ನನ್ನ ಗಂಡನನ್ನು ಕೊಂದ ನಂತರ, ನಾನು ಅವರಲ್ಲಿ ಒಬ್ಬನನ್ನು ನನ್ನನ್ನೂ ಕೊಲ್ಲುವಂತೆ ಕೇಳಿದೆ.
ಅವನು, ನಹಿನ್ ಮಾರೇಂಗೆ, ಮೋದಿ ಕೋ ಬೋಲ್ದೋ (ನಾವು ನಿನ್ನನ್ನು ಕೊಲ್ಲುವುದಿಲ್ಲ, ಪ್ರಧಾನಿ ಮೋದಿಗೆ ಹೇಳು) ಎಂದು ಹೇಳಿ ಹೊರಟುಹೋದನು. ದಾಳಿಯ ಸಮಯದಲ್ಲಿ ಯಾವುದೇ ಸೇನಾ ಸಿಬ್ಬಂದಿ ಇರಲಿಲ್ಲ ಎಂದು ಹೇಳಿದ್ದಾರೆ.ಮೂವರು ಸ್ಥಳೀಯ ಕಾಶೀರಿ ಪುರುಷರು ಬಿಸಿಲ್ಲಾ, ಬಿಸಿಲ್ಲಾ ಎಂದು ಘೋಷಣೆ ಕೂಗುತ್ತಾ ನನ್ನನ್ನು ರಕ್ಷಿಸಿದರು ಎಂದು ಪಲ್ಲವಿ ಹೇಳಿದರು. ಅವರು ನನ್ನ ಸಹೋದರರಂತೆ ಎಂದು ಪಲ್ಲವಿ ಹೇಳಿದರು.