Cheque Bounce Case | ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
2015ರಲ್ಲಿ ಸ್ನೇಹಮಯಿ ಕೃಷ್ಣ ಅವರು ಲಲಿತಾದ್ರಿಪುರದ ಕುಮಾರ್ ಎಂಬುವರಿಂದ ಸಾಲ ಪಡೆದಿದ್ದರು. ಸಾಲಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಅದು ಬೌನ್ಸ್ ಆಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ;
ಮುಡಾ ಪ್ರಕರಣದ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯ 2.25 ಲಕ್ಷ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
2015ರಲ್ಲಿ ಸ್ನೇಹಮಯಿ ಕೃಷ್ಣ ಅವರು ಲಲಿತಾದ್ರಿಪುರದ ಕುಮಾರ್ ಎಂಬುವರಿಂದ ಸಾಲ ಪಡೆದಿದ್ದರು. ಸಾಲಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಆದರೆ, ಸ್ನೇಹಮಯಿ ಕೃಷ್ಣ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಹಣ ನೀಡಲು ಸತಾಯಿಸುತ್ತಿದ್ದ ಕಾರಣ ಕುಮಾರ್ ಅವರು ಪ್ರಕರಣ ದಾಖಲಿಸಿದ್ದರು.
ಚೆಕ್ ಬೌನ್ಸ್ ಪ್ರಕರಣದಲ್ಲಿಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.
ನ್ಯಾಯಾಲಯದ ಶಿಕ್ಷೆ ಕುರಿತು ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ ಅವರು 'ಪ್ರತಿವಾದಿ ಕುಮಾರ್ ನನಗೆ ದುಡ್ಡು ಕೊಟ್ಟಿರಲಿಲ್ಲ. ನಾನು ನಂಬಿಕೆಯಿಂದ ನೀಡಿದ್ದ ಚೆಕ್ ಅನ್ನು ಬೌನ್ಸ್ ಮಾಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಜಾಮೀನು ದೊರೆತಿದೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದೇನೆʼ ಎಂದು ಹೇಳಿದ್ದಾರೆ.