ಪಿಎಸ್ಐ ನೇಮಕಾತಿ ಪರೀಕ್ಷೆ | ಸೆ.22ರ ಬದಲಾಗಿ ಸೆ.28ಕ್ಕೆ ಪರೀಕ್ಷೆ ಮರುನಿಗದಿ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.22ರ ಬದಲಾಗಿ ಸೆ.28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ.

Update: 2024-09-12 11:44 GMT
ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ.
Click the Play button to listen to article

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು, ಈ ಮೊದಲು ನಿಗದಿಯಾಗಿದ್ದ ಸೆ.22ರ ಬದಲಾಗಿ ಸೆ.28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಗುರುವಾರ ಮಾತನಾಡಿದ ಅವರು, ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಯೂ ಸೆ.22ರಂದೇ ನಿಗದಿಯಾಗಿರುವುದರಿಂದ ಎರಡೂ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಇದರ ಜೊತೆಗೆ ವಿಪಕ್ಷವಾದ ಬಿಜೆಪಿಯ ನಾಯಕರ ನಿಯೋಗವೂ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. 

ಇನ್ನು ಪ್ರಾಥಮಿಕ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆವು. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ ಎಂದು ಮನವಿಯನ್ನೂ ಮಾಡಲಾಗಿತ್ತು. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲಕರವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಎಲ್ಲ ಪಿಎಸ್‌ಐ ಅಭ್ಯರ್ಥಿಗಳ ಒಳಿತಿನಿಂದ ಸರ್ಕಾರದಿಂದ ಈ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Tags:    

Similar News