ಸಿಎಂ ಸಿದ್ದರಾಮಯ್ಯ, ಡಿಕೆಶಿ ದೆಹಲಿಯಲ್ಲಿ; ರಾಹುಲ್ ಗಾಂಧಿ ಭೇಟಿ ಕುತೂಹಲ

ಈಗಾಗಲೇ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆಶಿ ಎರಡೂವರೆ ವರ್ಷ ಬಳಿಕ ಸಿಎಂ ಸ್ಥಾನ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರ ಮೇಲೆ ಈಗಿನಿಂದಲೇ ಒತ್ತಡ ಹಾಕುತ್ತಿದ್ದಾರೆ.;

Update: 2025-07-10 05:37 GMT

ಡಿ.ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಹೈಕಮಾಂಡ್ ನಾಯಕ ರಾಹುಲ್ ಗಾಂಧಿಯವರನ್ನು ಪ್ರತ್ಯೇಕವಾಗಿ ಭೇಟಿಯಾಗಲು ಸಮಯ ಕೇಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಂದು ರಾಹುಲ್ ಗಾಂಧಿ ಇವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಬುಧವಾರ ಡಿಕೆ ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆಶಿ, ಎರಡೂವರೆ ವರ್ಷಗಳ ಬಳಿಕ ಸಿಎಂ ಸ್ಥಾನದ ವಿಚಾರವಾಗಿ ಈಗಿನಿಂದಲೇ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಸಂಜೆ ಸುರ್ಜೇವಾಲಾ ಜೊತೆ ಮಹತ್ವದ ಸಭೆ

ಪಕ್ಷದ ಶಾಸಕರ ಜೊತೆ ಸಭೆ ನಡೆಸಿ ಮಾಹಿತಿ ಕಲೆಹಾಕಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ದೆಹಲಿಗೆ ಆಗಮಿಸಿದ್ದಾರೆ. ಗುರುವಾರ ಸಂಜೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರೊಂದಿಗೆ ಸುರ್ಜೇವಾಲಾ ಸಭೆ ನಿಗದಿಪಡಿಸಿದ್ದಾರೆ. ಈ ಸಭೆಯಲ್ಲಿ ಪ್ರಮುಖವಾಗಿ ನಿಗಮ-ಮಂಡಳಿಗಳ ಸದಸ್ಯರ ನೇಮಕ ಹಾಗೂ ವಿಧಾನಪರಿಷತ್ ಸದಸ್ಯರ ಆಯ್ಕೆ ಅಂತಿಮಗೊಳಿಸುವ ಸಾಧ್ಯತೆಯಿದೆ.

ನಾಲ್ಕು ವಿಧಾನಪರಿಷತ್ ಸದಸ್ಯರ ನೇಮಕ ಇಂದು ಅಂತಿಮಗೊಳ್ಳುವ ನಿರೀಕ್ಷೆಯಿದೆ. ಇದೇ ವೇಳೆ, ಶಾಸಕರ ಜೊತೆ ನಡೆದ ಒನ್-ಟು-ಒನ್ ಸಭೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳ ಬಗ್ಗೆ ಸುರ್ಜೇವಾಲಾ ಸಂಜೆ ಸಭೆಯಲ್ಲಿ ಸಮಾಲೋಚನೆ ನಡೆಸಲಿದ್ದಾರೆ.  

Tags:    

Similar News