ವಾಲ್ಮೀಕಿ ಸಮುದಾಯ ಎಸ್ಸಿಗೆ: ಎಚ್ ಡಿ ಕುಮಾರಸ್ವಾಮಿ ಭರವಸೆ
ವಾಲ್ಮೀಕಿ ಸಮುದಾಯವನ್ನು ಎಸ್ಸಿ ಪ್ರವರ್ಗಕ್ಕೆ ಹಾಗೂ ಕುಂಚಿಟಿಗ, ಸಾದರ, ವೀರಶೈವ, ಸಮಾಜಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಪ್ರಯತ್ನ ಮಾಡುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.;
By : The Federal
Update: 2024-09-14 11:22 GMT
ವಾಲ್ಮೀಕಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಹಾಗೂ ಕುಂಚಿಟಿಗ, ಸಾದರ, ವೀರಶೈವ ಸಮಾಜಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ದನಿಗೂಡಿಸಿ ಪ್ರಯತ್ನ ಮಾಡುವುದಾಗಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಈ ಬಗ್ಗೆ ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಆಯಾ ಸಮುದಾಯಗಳ ಮುಖಂಡರು ಸಲ್ಲಿಸಿದ ಮನವಿ ಸ್ವೀಕರಿಸಿದ ಅವರು, ನಿಮ್ಮಗಳ ಬೇಡಿಕೆ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವರು ಹಾಗೂ ಸಾಮಾಜಿಕ ಸಬಲೀಕರಣ ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.
ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆ. ನಿಮ್ಮ ಬೇಡಿಕೆಯ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದು ಅವರು ಹೇಳಿದರು.