ಪಬ್ಲಿಕ್‌ ಪರೀಕ್ಷೆ | ಹೈಕೋರ್ಟ್ ಮಧ್ಯಂತರ ಆದೇಶ; ಪರೀಕ್ಷೆಗೆ ಅನುಮತಿ

Update: 2024-03-08 05:50 GMT

ರಾಜ್ಯ ಪಠ್ಯ ಕ್ರಮದ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿದೆ. ಹೀಗಾಗಿ ಮಾರ್ಚ್‌ 11ರ ಸೋಮವಾರದಿಂದ ಆರಂಭವಾಗಬೇಕಾಗಿದ್ದ ಬೋರ್ಡ್‌ ಎಕ್ಸಾಂಗಳು ಎಂದಿನಂತೆ ನಡೆಯಲಿವೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್‌ ಎಕ್ಸಾಂ ಸುತ್ತೋಲೆಯನ್ನು ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ಪೀಠ ಪಬ್ಲಿಕ್‌ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

ಸರ್ಕಾರದ ಮೇಲ್ಮನವಿಯಲ್ಲಿ ಏನಿತ್ತು?

ʼʼಹೈಕೋರ್ಟ್ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಸಲ್ಲಿಸಿದ ಮೇಲ್ಮನವಿಯಲ್ಲಿ, 53,680 ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರು ಎತ್ತಿವೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆʼʼ ಎಂದು ತಿಳಿಸಿತ್ತು.

Tags:    

Similar News