ಆಟಿಕೆ ಪಿಸ್ತೂಲ್ ತೋರಿಸಿ ಜ್ಯುವೆಲ್ಲರಿ ಶಾಪ್ ದೋಚಿದ್ದ ಮೂವರ ಬಂಧನ

ಕಳೆದ ಜುಲೈ 21ರಂದು ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿರುವ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ್ದ ದರೋಡೆಕೋರರ ತಂಡ, ಮಾಲೀಕನಿಗೆ ಆಟಿಕೆ ಗನ್ ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿತ್ತು.;

Update: 2025-09-06 06:19 GMT

ಸಾಂದರ್ಭಿಕ ಚಿತ್ರ

Click the Play button to listen to article

ನಗರದ ಹೊರವಲಯದ ಮಾಚೋಹಳ್ಳಿಯ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿ, ಮಾಲೀಕನಿಗೆ ಆಟಿಕೆ ಪಿಸ್ತೂಲಿನಿಂದ ಬೆದರಿಸಿ 90 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ದರೋಡೆಕೋರರನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಜುಲೈ 21ರಂದು ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿರುವ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ್ದ ದರೋಡೆಕೋರರ ತಂಡ, ಮಾಲೀಕನಿಗೆ ಆಟಿಕೆ ಗನ್ ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ತನಿಖೆ ಚುರುಕುಗೊಳಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದರು.

ಬಂಧಿತ ಆರೋಪಿಗಳನ್ನು ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ರೇಕರ್ ಮತ್ತು ರಂಶಾದ್ ಎಂದು ಗುರುತಿಸಲಾಗಿದೆ. ಇವರು ಬಿಹಾರ ಮತ್ತು ಬೆಂಗಳೂರು ಮೂಲದವರಾಗಿದ್ದಾರೆ. ಆರೋಪಿಗಳ ಬಂಧನದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವೆಡೆ ನಡೆದಿದ್ದ 40ಕ್ಕೂ ಹೆಚ್ಚು ದರೋಡೆ ಮತ್ತು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಬೇರೆ ರಾಜ್ಯಗಳಿಗೂ ಮಾಹಿತಿ ರವಾನಿಸಿ ತನಿಖೆ ನಡೆಸುತ್ತಿದ್ದರು. ಇದೀಗ ಮೂವರನ್ನು ಬಂಧಿಸಲಾಗಿದ್ದು, ದರೋಡೆ ಗ್ಯಾಂಗ್‌ನಲ್ಲಿದ್ದ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Tags:    

Similar News