ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಮೂವರು ಮಕ್ಕಳು ಅಸ್ವಸ್ಥ
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಗರದ ನೆಹರೂ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.;
ಅಸ್ವಸ್ಥಗೊಂಡಿದ್ದ ಮಕ್ಕಳಿಗೆ ಆಂಬ್ಯುಲೆನ್ಸ್ನಲ್ಲೇ ಬಿಜೆಪಿ ಎಂಎಲ್ಸಿ ಡಾ.ಧನಂಜಯ ಸರ್ಜಿ ಚಿಕಿತ್ಸೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ವೇಳೆ ಪಥಸಂಚಲನದಲ್ಲಿ ಭಾಗವಹಿಸಿದ್ದ ಶಾಲಾ ಮಕ್ಕಳಲ್ಲಿ ಮೂವರು ದಿಢೀರ್ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಗರದ ನೆಹರೂ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ತಕ್ಷಣವೇ ಸಿಬ್ಬಂದಿ ಮಕ್ಕಳನ್ನು ಕ್ರೀಡಾಂಗಣದಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಅಸ್ವಸ್ಥಗೊಂಡಿದ್ದ ಮಕ್ಕಳಿಗೆ ಆಂಬ್ಯುಲೆನ್ಸ್ನಲ್ಲೇ ಬಿಜೆಪಿ ಎಂಎಲ್ಸಿ ಡಾ.ಧನಂಜಯ ಸರ್ಜಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಲ್ಕಿಸ್ ಬಾನು, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹಾಗೂ ಎಸ್.ಪಿ. ಮಿಥುನ್ ಕುಮಾರ್ ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು. ಮಳೆಯ ನಡುವೆಯೂ ಆಕರ್ಷಕ ಪಥಸಂಚಲನ ನಡೆಯಿತು.