ಚಿತ್ರದುರ್ಗದಲ್ಲಿ ಕಾರು ಅಪಘಾತ, ಪೊಲೀಸ್ ಪೇದೆ ಸೇರಿ ಮೂವರು ಸಾವು
ಇನ್ನೋವಾ ಕಾರಿನಲ್ಲಿ ಒಂಬತ್ತು ಮಂದಿ ಗೋವಾಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡಿದ್ದರು. ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.;
ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28), ಸರವಣ್ (30), ಶ್ರೀಧರ್ (30) ಎನ್ನಲಾಗಿದ್ದು, ಅರ್ಜುನ್ ತಮಿಳುನಾಡಿನಲ್ಲಿ ಪೊಲೀಸ್ ಪೇದೆಯಾಗಿದ್ದರು ಎಂದು ತಿಳಿದುಬಂದಿದೆ.
ಇನ್ನೋವಾ ಕಾರಿನಲ್ಲಿ ಒಂಬತ್ತು ಮಂದಿ ಗೋವಾಗೆ ಪ್ರಯಾಣಿಸುತ್ತಿದ್ದರು. ಅಘಘಾತದ ರಭಸಕ್ಕೆ ಮೂವರು ಅಲ್ಲೇ ಮೃತಪಟ್ಟರೆ, ಆರು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದು ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಸ್ನೇಹಿತರ ಜತೆಗೆ ಗೋವಾ ಪ್ರವಾಸಕ್ಕೆಂದು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.