Bangalore Crime | ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಗಲಾಟೆ: ಮೂವರಿಗೆ ಚಾಕು ಇರಿತ
ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮರಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.;
By : The Federal
Update: 2024-11-22 10:55 GMT
ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮರಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿದ್ದು, ಮೂವರಿಗೆ ಚಾಕು ಇರಿತವಾಗಿದೆ ಎಂದು ವರದಿಯಾಗಿದೆ.
ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.